FILM
ಧಾರವಾಹಿ ಶೂಟಿಂಗ್ ವೇಳೆ ಬಿದ್ದು ಗಂಭೀರವಾಗಿ ಗಾಯಗೊಂಡ ನಟ ಮಂಡ್ಯ ರಮೇಶ್

ಬೆಂಗಳೂರು ನವೆಂಬರ್ 30: ಹಿರಿಯ ನಟ ರಂಗಕರ್ಮಿ ಮಂಡ್ಯ ರಮೇಶ್ ಅವರು ಚಿತ್ರೀಕರಣದ ವೇಳೆ ಬಿದ್ದು ಗಂಭಿರವಾಗಿ ಗಾಯಗೊಂಡಿದ್ದಾರೆ. ಧಾರಾವಾಹಿ ಶೂಟಿಂಗ್ ವೇಳೆ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಈ ಘಟನೆ ನಡೆದಿದೆ. ನಟ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಟ ರಮೇಶ್ ಅರವಿಂದ್ ನಿರ್ಮಾಣ ಮಾಡುತ್ತಿರುವ ಆಸೆ ಧಾರವಾಹಿ ಶೂಟಿಂಗ್ ಬೆಂಗಳೂರಿನ ರಾಜರಾಜೇಶ್ವರಿ ನಗರದ ಹೊರಭಾಗದಲ್ಲಿರುವ ಕಲ್ಲು ಕ್ವಾರಿಯ ಬಳಿ ನಡೆಯುತ್ತಿತ್ತು, ಈ ವೇಳೆ ದುರ್ಘಟನೆ ನಡೆದಿದೆ. ಕ್ವಾರಿಯಲ್ಲಿ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ರಮೇಶ್ ಕಾಲು ಜಾರಿ ಬಿದ್ದಿದ್ದಾರೆ. ಘಟನೆಯಲ್ಲಿ ನಟ ಮಂಡ್ಯ ರಮೇಶ್ ಅವರ ಕಾಲು ಮತ್ತು ಮುಂಗೈ ಮುರಿತವಾಗಿದೆ ಎಂದು ವರದಿಯಾಗಿದೆ.

ಕಲ್ಲು ಕ್ವಾರಿಯಲ್ಲಿ ಬಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು ವೈದ್ಯರು ಕಾಲಿಗೆ ಎರಡು ಆಪರೇಷನ್ ಮಾಡಿದ್ದಾರೆ ಎಂದು ವರದಿಯಾಗಿದೆ. ಶೂಟಿಂಗ್ ಸ್ಥಳದಲ್ಲಿ ಮೇಲಿಂದ ಬಿದ್ದ ಕಾರಣ ಮುಂಗೈ ಮತ್ತು ಬಲಗಾಲಿಗೆ ತೀವ್ರಗಾಯವಾಗಿದೆ. ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಮುಂದಿನ ಎರಡು ದಿನಗಳಲ್ಲಿ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ. ರಮೇಶ್ ಅರವಿಂದ್ ನಿರ್ಮಾಣದ ‘ಆಸೆ’ ಕನ್ನಡದ ಸ್ಟಾರ್ ಸುವರ್ಣದಲ್ಲಿ ‘ಆಸೆ’ ಧಾರಾವಾಹಿ ಪ್ರಸಾರವಾಗಲಿದೆ.