Connect with us

    KARNATAKA

    ಮಂಡ್ಯ: ರಜೆ ಮೇಲೆ ಮನೆಗೆ ಬಂದ ಯೋಧ ಮೆಟ್ಟಿಲಿನಿಂದ ಬಿದ್ದುಮೃತ್ಯು..!

    ಮಂಡ್ಯ : ರಜೆ ಮೇಲೆ ಮನೆಗೆ ಬಂದಿದ್ದ ಯೋಧರೊಬ್ಬರು ತಮ್ಮ ಮನೆಯ ಮೆಟ್ಟಿಲಿನಿಂದ ಆಕಸ್ಮಿಕವಾಗಿ ಬಿದ್ದು ಸಾವಿಗೀಡಾಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಜಿಲ್ಲೆಯ ಮದ್ದೂರು ತಾಲೂಕಿನ ಚಾಮನಹಳ್ಳಿ ಗ್ರಾಮದ(38) ಮೃತಪಟ್ಟಿರುವ ಯೋಧ.

    ಹರಿಯಾಣ ರಾಜ್ಯದ ಸಿಹಾರ್ ಎಂಬ ಗಡಿಭಾಗದಲ್ಲಿ  ಸೇನೆಯಲ್ಲಿ ಸಿ.ಕೆ. ಸಂದೀಪ್ ಕುಮಾರ್ ಕರ್ತವ್ಯ ನಿರ್ವಹಿಸುತ್ತಿದ್ದರು. ಕಳೆದ 10 ದಿನಗಳ ಹಿಂದೆಯಷ್ಟೇ ರಜೆಯ ಮೇಲೆ ಗ್ರಾಮಕ್ಕೆ ಬಂದಿದ್ದ ಸಂದೀಪ್ ಕುಮಾರ್ ಅವರು ರಾತ್ರಿ ತಮ್ಮ ಮನೆಯ ಮೆಟ್ಟಿಲಿನಿಂದ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಕುಟುಂಬಸ್ಥರು ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮದ್ದೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.  ಯೋಧ ಸಂದೀಪ್ ಕುಮಾರ್ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಯಲಿದೆ  ಜಿಲ್ಲಾಡಳಿತ ಮಾಹಿತಿ ನೀಡಿದೆ.

    Share Information
    Advertisement
    Click to comment

    You must be logged in to post a comment Login

    Leave a Reply