LATEST NEWS
ಮಂಡ್ಯ: ವಿಷಾಹಾರ ಸೇವಿಸಿ ಮೃತಪಟ್ಟವರ ಸಂಖ್ಯೆ ಎರಡಕ್ಕೆ ಏರಿಕೆ

ಮಂಡ್ಯ, ಮಾರ್ಚ್ 18: ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ವಿಷಾಹಾರ ಸೇವಿಸಿ ಮೃತಪಟ್ಟವರ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ. ಫುಡ್ ಪಾಯ್ಸನ್ ನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮತ್ತೊಬ್ಬ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.
ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಮೀಬ್ ಚಿಕಿತ್ಸೆ ಫಲಕಾರಿಯಾಗದೆ ಮಧ್ಯರಾತ್ರಿ ಮೃತಪಟ್ಟಿದ್ದಾನೆ. ಇದರೊಂದಿಗೆ ಸಾವಿನ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ.

ಮಳವಳ್ಳಿ ತಾಲೂಕಿನ ಕಾಗೆಪುರ ಗ್ರಾಮದ ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ಹೋಟೆಲ್ ನಲ್ಲಿ ಶುಕ್ರವಾರ ಹೋಳಿ ಆಚರಣೆಗಾಗಿ ಉದ್ಯಮಿ ಪುಷ್ಪೇಂದ್ರ ಕುಮಾರ್ 150 ಮಂದಿಗೆ ಊಟ ಬುಕ್ ಮಾಡಿದ್ದರು. ಊಟ ಮಾಡಿದ ಉದ್ಯಮಿಯ 61 ಸಂಬಂಧಿಕರು ಸೇರಿ ನೂರಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದರು.
ಗೋಕುಲ ವಿದ್ಯಾ ಸಂಸ್ಥೆಯ 5 ವಿದ್ಯಾರ್ಥಿಗಳನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗಿತ್ತು. ಮೇಘಾಲಯ ವಿದ್ಯಾರ್ಥಿ ಮೃತಪಟ್ಟಿದ್ದು, ಇದೀಗ ಮತ್ತೊಬ್ಬ ವಿದ್ಯಾರ್ಥಿ ನಮೀಬ್ ಕೂಡ ಮೃತಪಟ್ಟಿದ್ದಾನೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.