Connect with us

    LATEST NEWS

    ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರ ಪಿ. ರಮಾನಾಥ ಹೆಗ್ಡೆ ನಿಧನ

    ಮಂಗಳೂರು ಜನವರಿ 16 :ಮಂಗಳಾದೇವಿ ದೇವಸ್ಥಾನದ ಆಡಳಿತ ಮೂಕ್ತೇಸರರಾದ ರಮಾನಾಥ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾಗಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್ತು.


    ಮಂಗಳಾದೇವಿ ದೇವಸ್ಥಾನದಲ್ಲಿ ಕಳೆದ 31ವರ್ಷಗಳಿಂದ ಆಡಳಿತ ಮೊಕ್ತೇಸರರಾಗಿ ಸೇವೆ ಸಲ್ಲಿಸಿದ್ದರು. ನಗರದ ರಾಮಕೃಷ್ಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸ್ಥಾಪಕ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು. ಜನವರಿ 17ರಂದು ಮಂಗಳಾದೇವಿ ದೇವಸ್ಥಾನ ಸಮೀಪದ ಸ್ವಗೃಹದಲ್ಲಿ ಬೆಳಗ್ಗೆ 8.00 ರಿಂದ 11.00 ವರೆಗೆ ನಡೆಯಲಿದೆ. 11.30ಕ್ಕೆ ನಂದಿಗುಡ್ಡೆ ರುದ್ರಭೂಮಿಯಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ.

     

    ಶ್ರೀ ಕ್ಷೇತ್ರ ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿದ್ದ ಶ್ರೀ ಪಿ.ರಮನಾಥ್ ಹೆಗ್ಡೆಯವರ ನಿಧನಕ್ಕೆ ಶಾಸಕ ವೇದವ್ಯಾಸ್ ಕಾಮತ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದರು. ಮಂಗಳಾದೇವಿ ದೇವಸ್ಥಾನದಲ್ಲಿ ಸುಧೀರ್ಘ ಮೂರು ದಶಕಗಳಿಂದ ಆಡಳಿತ ಮೊಕ್ತೇಸರರಾಗಿ ಸೇವೆ ಸಲ್ಲಿಸಿದ್ದ ಇವರು ಧಾರ್ಮಿಕ ಕ್ಷೇತ್ರಕ್ಕೆ ಗಮನಾರ್ಹ ಸೇವೆ ಸಲ್ಲಿಸಿದ್ದು ಮಾತ್ರವಲ್ಲದೇ, ಹಲವಾರು ಸಾಮಾಜಿಕ ಚಟುವಟಿಕೆಗಳಲ್ಲಿಯೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಇವರ ನಿಧನವು ಸಮಾಜಕ್ಕೆ ತುಂಬಲಾರದ ನಷ್ಟವಾಗಿದ್ದು ಅವರ ಅಪಾರ ಬಂಧುಮಿತ್ರರು ಹಾಗೂ ಕುಟುಂಬದವರಿಗೆ ಅಗಲಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿ ನೀಡಲಿ, ಮತ್ತು ಅವರ ದಿವ್ಯಾತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಭಗವಂತನಲ್ಲಿ ಪ್ರಾರ್ಥನೆ ಎಂದು ದುಃಖ ವ್ಯಕ್ತಪಡಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply