Connect with us

  LATEST NEWS

  ಮಂಗಳೂರು ಇಎಸ್ ಐ ಆಸ್ಪತ್ರೆ ಮೇಲ್ದರ್ಜೆಗೇರಿಸಲು ನಳಿನ್ ಕುಮಾರ್ ಕಟೀಲ್ ಮನವಿ

  ಮಂಗಳೂರು ಫೆಬ್ರವರಿ 08: ಮಂಗಳೂರಿನಲ್ಲಿರುವ ಇ ಎಸ್ ಐ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವಂತೆ ಕೇಂದ್ರ ಕಾರ್ಮಿಕ ಸಚಿವರಾದ ಶ್ರೀ ಭೋಪೇಂದ್ರ ಯಾದವ್ ರವರನ್ನು ನಳಿನ್ ಕುಮಾರ್ ಕಟೀಲ್ ರವರು ನವದೆಹಲಿಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು.


  ಲ್ಲೆಯ ಶ್ರಮಿಕ ವರ್ಗಕ್ಕೆ ಅನುಕೂಲವಾಗುವಂತೆ, ಮಂಗಳೂರು ಇಎಸ್ಐ ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿ, ಅತ್ಯಾದುನಿಕ ವೈದ್ಯಕೀಯ ಉಪಕರಣಗಳು, ಎಂ.ಆರ್.ಐ. ಘಟಕ, ಸಿ.ಟಿ. ಸ್ಕಾನಿಂಗ್ ಯಂತ್ರಗಳ ಅಳವಡಿಕೆ, ತಜ್ಞ ವೈದ್ಯರ ಹಾಗೂ ಇತರೆ ಸಿಬ್ಬಂದಿಗಳ ನೇಮಕಾತಿಯೊಂದಿಗೆ ವಿವಿಧ ವಿಶೇಷ ವೈದ್ಯಕೀಯ ಸೇವೆಗಳು ದೊರೆಯುವಂತಾಗಲು ಇಎಸ್ ಐ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಬೇಕೆಂದು ಮಾನ್ಯ ಸಚಿವರಲ್ಲಿ ದಕ್ಷಿಣ ಕನ್ನಡ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್ ರವರು ಮನವಿ ಮಾಡಿದ್ದಾರೆ. ಇದಕ್ಕೆ ಸ್ಪಂದಿಸಿದ ಮಾನ್ಯ ಸಚಿವರು ಈ ಬಗ್ಗೆ ಪರಿಶೀಲಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

  Share Information
  Advertisement
  Click to comment

  You must be logged in to post a comment Login

  Leave a Reply