DAKSHINA KANNADA
ಮಂಗಳೂರು : ‘ರಚನಾ’ ಗೆ 25 ರ ಸಂಭ್ರಮ, ನ. 3 ರಂದು ನಗರದಲ್ಲಿ ಬೆಳ್ಳಿ ಹಬ್ಬದ ಸಂಭ್ರಮಾಚರಣೆ
ಮಂಗಳೂರು: ಕೊಂಕಣಿ ಕಥೊಲಿಕ್ ಉದ್ಯಮಿಗಳ, ವೃತ್ತಿಪರರ ಮತ್ತು ಕೃಷಿಕರ ಸಂಸ್ಥೆ ‘ರಚನಾ’ (Rachana )ಇದರ ಬೆಳ್ಳಿ ಹಬ್ಬ ಸಮಾರಂಭ ನವೆಂಬರ್ 3 ರಂದು ಭಾನುವಾರ ಸಂಜೆ 6 ಗಂಟೆಗೆ ನಗರದ ಕುಲಶೇಖರದ ಕೊರ್ಡೆಲ್ ಸಭಾಂಗಣದಲ್ಲಿ ನಡೆಯಲಿದೆ.
ನಗರದಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ರಚನಾ ಅಧ್ಯಕ್ಷ ಜಾನ್ ಮೊಂತೇರೊ, ಸಂಚಾಲಕಿ ಮಾರ್ಜೊರಿ ಟೆಕ್ಸೇರಾ ಅವರು ಮಾಹಿತಿ ನೀಡಿದರು. ಮಂಗಳೂರು ಧರ್ಮ ಪ್ರಾಂತದ ಬಿಷಪ್ ಪೀಟರ್ ಪಾವ್ಲ್ ಸಲ್ಡಾನ್ಹ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಬೆಂಗಳೂರಿನ ಆರ್ಚ್ ಬಿಷಪ್ ಪೀಟರ್ ಮಚಾದೊ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪುಣೆಯ ಮಿಲಿಟರಿ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ (military institute of technology) ಕಮಾಂಡೆಂಟ್ ಆಗಿರುವ ರಿಯರ್ ಅಡ್ಮಿರಲ್ ನೆಲ್ಸನ್ ಡಿಸೋಜ, NRI ಉದ್ಯಮಿ ಮೈಕಲ್ ಡಿಸೋಜ, ರೋಹನ್ ಕಾರ್ಪೋರೇಶನ್‍ನ ಚೇರ್’ಮ್ಯಾನ್ ರೋಹನ್ ಮೊಂತೇರೊ ಅವರುಗಳು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ರಚನಾ ಅಧ್ಯಕ್ಷ ಜಾನ್ ಮೊಂತೇರೊ, ಬೆಳ್ಳಿ ಹಬ್ಬದ ಸಮಾರಂಭದ ಸಂಚಾಲಕಿ ಮಾರ್ಜರಿ ಟೆಕ್ಸೇರಾ ಕೂಡ ಉಪಸ್ಥಿತರಿರುವರು.
25 ವರ್ಷಗಳ ಸವಿನೆನಪಿಗಾಗಿ ಕೊಂಕಣಿ ಕ್ರೈಸ್ತ ಸಮುದಾಯದ ಯುವ ಉದ್ಯಮಿಗಳಿಗೆ ನೆರವಾಗುವ ನಿಟ್ಟಿನಲ್ಲಿ ರಚನಾ ಕಥೊಲಿಕ್ ಸೌಹಾರ್ದ ಸಹಕಾರಿ ಸಂಘವನ್ನು ಪ್ರಾರಂಭಿಸುವ ಯೋಜನೆ ಹಮ್ಮಿಕೊಳ್ಳಲಾಗಿದ್ದು, ಸಮಾರಂಭದಲ್ಲಿ ಇದರ ಉದ್ಘಾಟನೆ ನೆರವೇರಲಿದೆ. ಈ ಸಂದರ್ಭದಲ್ಲಿ ʼರಚನಾʼ ಪ್ರಾರಂಭಿಸಲು ಕಾರಣಕರ್ತರಾದ ಮಾರಿಟ್ಟೊ ಸಿಕ್ವೇರಾ ಅವರನ್ನು ಸನ್ಮಾನಿಸಲಾಗುವುದು. ರಚನಾದ ಉಗಮ ಮತ್ತು ನಡೆದು ಬಂದ ಹಾದಿಯ ಬಗ್ಗೆ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲಾಗುವುದು ಎಂದರು. ರಚನಾ ಅಧ್ಯಕ್ಷ ಜಾನ್ ಮೊಂತೇರೊ, ಸಂಚಾಲಕಿ ಮಾರ್ಜೊರಿ ಟೆಕ್ಸೇರಾ, ಕಾರ್ಯದರ್ಶಿ ವಿಜಯ್ ವಿಶ್ವಾಸ್ ಲೋಬೊ, ಕೋಶಾಧಿಕಾರಿ ನೆಲ್ಸನ್ ಮೊಂತೇರೊ, ಕಾರ್ಯಕಾರಿ ಸಮಿತಿ ಸದಸ್ಯರಾದ ಜೆ.ಆರ್. ಲೋಬೊ, ರೊಯ್ ಕ್ಯಾಸ್ತೆಲಿನೊ, ಟೈಟಸ್ ನೊರೊನಾ ಉಪಸ್ಥಿತರಿದ್ದರು.
You must be logged in to post a comment Login