LATEST NEWS
ಮಂಗಳೂರು – ಚಾಲಕನ ನಿಯಂತ್ರಣ ತಪ್ಪಿ 15 ಅಡಿ ಆಳಕ್ಕೆ ಬಿದ್ದ ಕಾರು

ಮಂಗಳೂರು ಮಾರ್ಚ್ 17: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ನೇತ್ರಾವತಿ ನದಿಯ ಬಳಿಯ ಕಂದಕಕ್ಕೆ ಉರುಳಿ ಬಿದ್ದ ಘಟನೆ ನಡೆದಿದ್ದು, ಘಟನೆಯಲ್ಲಿ ಕಾರಿನಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು-ಕಲ್ಲಾಪು ಬಳಿಯ ನೇತ್ರಾವತಿ ನದಿ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸುಮಾರು 15 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದಿದೆ. ತಲಪಾಡಿಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರು ರಾಷ್ಟ್ರೀಯ ಹೆದ್ದಾರಿಯ ಕಲ್ವರ್ಟ್ ಬಳಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಈ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್, ಐವರೂ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನೆ ಕುರಿತು ಮಂಗಳೂರು ದಕ್ಷಿಣ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
