LATEST NEWS
ಮಂಗಳೂರು ವಿಮಾನ ನಿಲ್ದಾಣಕ್ಕೆ ಇಮೇಲ್ ನಲ್ಲಿ ಬಾಂಬ್ ಬೆದರಿಕೆ – ಬಿಗಿ ಭದ್ರತೆ
ಮಂಗಳೂರು ಮೇ 04: ಮ0ಗಳೂರು ಅಂತಾರಾಷ್ಟಿಯ ವಿಮಾನ ನಿಲ್ದಾಣದಲ್ಲಿ ಮತ್ತು ವಿಮಾನಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಅನಾಮಿಕ ವ್ಯಕ್ತಿಯೊಬ್ಬ ಇಮೇಲ್ ಮೂಲಕ ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರದ ಕಚೇರಿಗೆ ಬೆದರಿಕೆ ಇ-ಮೇಲ್ ಹಾಕಿದ್ದಾನೆ. ಎಪ್ರಿಲ್ 29 ರಂದು ಈ ಪ್ರಕರಣ ನಡೆದರೂ ಮಂಗಳೂರು ಪೊಲೀಸ್ ಕಮಿಷನರ್ ಮಾತ್ರ ಯಾವುದೇ ಮಾಹಿತಿಯನ್ನು ನೀಡದೇ ಮುಚ್ಚಿಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಟೆರರೈಜರ್ಸ್ 111 ಸಂಘಟನೆಯ ಹೆಸರಿನಲ್ಲಿ ಇಮೇಲ್ ಸಂದೇಶ ಬಂದಿದ್ದು, ವಿಮಾನ ನಿಲ್ದಾಣದಲ್ಲಿ ಸ್ಟೋಟಕವನ್ನು ಇಡಲಾಗಿದೆ. ವಿಮಾನದಲ್ಲಿಯೂ ಸ್ಫೋಟಕಗಳನ್ನು ಅಡಗಿಸಿ ಇಡಲಾಗಿದೆ. ಕೆಲವೇ ಗಂಟೆಗಳಲ್ಲಿ ಅದು ಸ್ಫೋಟಗೊಳ್ಳಲಿದ್ದು, ದೊಡ್ಡ ಮಟ್ಟದ ರಕ್ತಪಾತವಾಗಲಿದೆ. ಈ ಘಟನೆಯಲ್ಲಿ ಹೆಚ್ಚು ಜನ ಸಾಯುವುದನ್ನು ನಿರೀಕ್ಷೆ ಮಾಡುತ್ತೇವೆ ಎಂದು ಸಂದೇಶ ಹಾಕಲಾಗಿದೆ.
ಎಪ್ರಿಲ್ 29ರಂದು ವಿಮಾನ ನಿಲ್ದಾಣದ ಪ್ರಾಧಿಕರದ ಇಮೇಲ್ ಸಂದೇಶ ಬಂದಿದ್ದು, ಈ ಬಗ್ಗೆ ವಿಮಾನ ನಿಲ್ದಾಣದ ಅಧಿಕಾರಿಗಳು ಮಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೇಲಧಿಕಾರಿಗಳ ಸೂಚನೆಯಂತೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.