Connect with us

    LATEST NEWS

    ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2 ಕೋಟಿ ಮೌಲ್ಯದ 5 ಕೆಜಿ ಚಿನ್ನ ವಶಕ್ಕೆ

    ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2 ಕೋಟಿ ಮೌಲ್ಯದ 5 ಕೆಜಿ ಚಿನ್ನ ವಶಕ್ಕೆ

    ಮಂಗಳೂರು ಜನವರಿ 15: ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 2 ಕೋ.ರೂ. ಮೌಲ್ಯದ 5 ಕೆ.ಜಿ. ಚಿನ್ನವನ್ನು ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ.ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಏರ್ ಕಾರ್ಗೋ ಕಾಂಪ್ಲೆಕ್ಸ್‌ನಲ್ಲಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಕಂಪನಿಯೊಂದರ ನಿರ್ದೇಶಕ ಸಹಿತ ಇಬ್ಬರನ್ನು ಡಿಆರ್‌ ಐ ಅಧಿಕಾರಿಗಳು ಬಂಧಿಸಿದ್ದಾರೆ.

    ಬಂಧಿತರನ್ನು ಉಡುಪಿಯ ಸ್ವರೂಪ್ ಮಿನರಲ್ ರಿಸೋರ್ಸಸ್ ಕಂಪನಿಯ ನಿರ್ದೇಶಕ ಮನೋಹರ್ ಕುಮಾರ್ ಪೂಜಾರಿ ಮತ್ತು ಮಂಗಳೂರಿನ ಅಶೋಕನಗರ ನಿವಾಸಿ ಲೋಹಿತ್ ಶ್ರೀಯಾನ್ ಎಂದು ಗುರುತಿಸಲಾಗಿದೆ.

    ಆರೋಪಿ ಮನೋಹರ್ ಕುಮಾರ್‌ನನ್ನು ಬೆಂಗಳೂರಿನಲ್ಲಿ ಬಂಧಿಸಿದರೆ, ಲೋಹಿತ್‌ನನ್ನು ಮಂಗಳೂರಿನಲ್ಲಿ ಬಂಧಿಸಲಾಗಿದೆ. ಬೆಂಗಳೂರು ಮತ್ತು ಮಂಗಳೂರು ಡಿಆರ್‌ಐ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

    ಆರೋಪಿಗಳು ಗಣಿ ಉದ್ಯಮದಲ್ಲಿ ಬಳಸುವ ಲೋಹದ ಕನ್ವೆಯರ್ ಡ್ರೈವ್ ಚೈನ್‌ನ ಒಳಭಾಗದಲ್ಲಿರಿಸಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದರು ಎನ್ನಲಾಗಿದೆ. ಸ್ವರೂಪ್ ಮಿನರಲ್ ಕಂಪನಿ ಮೈನಿಂಗ್ ಕನ್ವೆಯರ್ ಡ್ರೈವ್ ಚೈನ್ ಆಮದು ಮಾಡಿಕೊಳ್ಳುತ್ತಿದ್ದು, ಸರಕು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿತ್ತು. ಅದರೊಳಗೆ ಚಿನ್ನ ಅಡಗಿಸಿಟ್ಟು ಸಾಗಾಟ ಮಾಡುತ್ತಿರುವ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ಲಭಿಸಿತ್ತು. ಈ ಮಾಹಿತಿ ಆಧರಿಸಿ ಸರಕನ್ನು ಸ್ಕ್ಯಾನ್ ಮಾಡಲಾಗಿದ್ದು, ತಾಂತ್ರಿಕ ಸಿಬ್ಬಂದಿ ಮತ್ತು ಲೇಥ್ ಬಳಸಿ ಅದನ್ನು ತೆರೆಯಲಾಯಿತು.

    ಮೈನಿಂಗ್ ಕನ್ವೇಯರ್ ಬೆಲ್ಟ್‌ನ ಒಳಭಾಗದಲ್ಲಿ ಐದು ವೃತ್ತಾಕಾರದ ಚಿನ್ನದ ತಟ್ಟೆಗಳನ್ನು ಅಡಗಿಸಿಡಲಾಗಿತ್ತು. ಅವುಗಳಲ್ಲಿ 24 ಕ್ಯಾರಟ್ ಗುಣಮಟ್ಟದ 4.995 ಕೆ.ಜಿ. ಚಿನ್ನ ಪತ್ತೆಯಾಗಿದೆ. ಚಿನ್ನ ಕಳ್ಳ ಸಾಗಣೆಯ ಜಾಲ ಮತ್ತು ಅದರಲ್ಲಿ ಹೂಡಿಕೆ ಮಾಡುತ್ತಿದ್ದವರು ಹಾಗೂ ಈವರೆಗೆ ನಡೆದಿರುವ ಕಳ್ಳಸಾಗಣೆಯ ಒಟ್ಟು ಪ್ರಮಾಣದ ಕುರಿತು ತನಿಖೆಯನ್ನು ಅಧಿಕಾರಿಗಳು ಮಂದುವರೆಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply