LATEST NEWS
ಮಂಗಳೂರು ಎರ್ ಪೋರ್ಟ್ ಹುಸಿಬಾಂಬ್ ಕರೆ ಮಾಡಿದಾತ ಆರೆಸ್ಟ್
ಮಂಗಳೂರು ಅಗಸ್ಟ್ 19: ಮಂಗಳೂರು ಬಜ್ಪೆಯಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿಬಾಂಬ್ ಕರೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಕಾರ್ಕಳ ಮುದ್ರಾಡಿಯ ವಸಂತ ಎಂದು ಗುರುತಿಸಲಾಗಿದೆ.
ಇಂದು ಮಧ್ಯಾಹ್ನ ಸಂದರ್ಭ ಮಂಗಳೂರು ಏರ್ ಪೋರ್ಟ್ ಗೆ ಕರೆ ಮಾಡಿದ ವ್ಯಕ್ತಿ ಏರ್ಪೋರ್ಟ್ನೊಳಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದಾನೆ. ಕೂಡಲೇ ಸಿಐಎಸ್ ಎಫ್ ಸಿಬ್ಬಂದಿ ಸೇರಿ ಪೊಲೀಸರಿಂದ ಸಂಪೂರ್ಣ ಏರ್ ಪೋರ್ಟ್ ತಪಾಸಣೆ ಮಾಡಿದ ನಂತರ ಇದೊಂದು ಹುಸಿ ಬಾಂಬ್ ಕರೆ ಎಂದು ತಿಳಿದು ಬಂದಿದೆ.
ಈ ಘಟನೆ ಕುರಿತಂತೆ ಎರ್ ಪೋರ್ಟ್ ಅಧಿಕಾರಿಗಳು ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದೀಗ ಅಧಿಕಾರಿಗಳು ಮಾಹಿತಿ ಕಲೆ ಹಾಕಿ ಕೆಲವೇ ಗಂಟೆಗಳಲ್ಲಿ ಅರೋಪಿಯನ್ನು ಬಂಧಿಸಿದ್ಧಾರೆ. ಬಂಧಿತನು ಕಾರ್ಕಳ ಮುದ್ರಾಡಿಯ ವಸಂತ ಎಂದು ಗುರುತಿಸಲಾಗಿದ್ದು ಮಂಗಳೂರು ಸಿಸಿಬಿ ತಂಡ ಮುದ್ರಾಡಿಯ ಮನೆಯಿಂದ ಆರೋಪಿ ವಸಂತನನ್ನು ವಶಕ್ಕೆ ಪಡೆದಿದ್ದಾರೆ ವಸಂತ ಹೋಟೆಲ್ ನಲ್ಲಿ ಕೆಲಸಕ್ಕಿದ್ದು ಮಾನಸಿಕ ಅಸ್ವಸ್ಥನೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.
You must be logged in to post a comment Login