DAKSHINA KANNADA
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ವಿದೇಶಿ ಕರೆನ್ಸಿ ಪತ್ತೆ – ಒರ್ವನ ಬಂಧನ
ಮಂಗಳೂರು ಅಗಸ್ಟ್ 30: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ವಿದೇಶಿ ಕರೆನ್ಸಿಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯನ್ನು ಕಸ್ಟಮ್ಸ್ ನ ಡಿ ಆರ್ ಐ ವಿಭಾಗದ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತನನ್ನು ಕಾಸರಗೋಡು ಮೂಲದ ಅಬ್ದುಲ್ ಬಶೀರ್ ಎಂದು ಗುರುತಿಸಲಾಗಿದೆ.
ದುಬೈಗೆ ತೆರಳಲು ಅಬ್ದುಲ್ ಬಶೀರ್ ಇಂದು 8 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ. ವಿಮಾನ ನಿಲ್ದಾಣದಲ್ಲಿ ಈತನ ಲಗೇಜ್ ಚೆಕ್ ಮಾಡುವ ಸಂದರ್ಭದಲ್ಲಿ ವಿದೇಶಿ ಕರೆನ್ಸಿ ಗಳು ಪತ್ತೆಯಾಗಿವೆ. ಡಿ ಆರ್ ಐ ಅಧಿಕಾರಿಗಳು ವಶಪಡಿಸಿಕೊಂಡಿರುವ ವಿದೇಶಿ ಕರೆನ್ಸಿಗಳ ಒಟ್ಟು ಮೊತ್ತ ೨೦ ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.
You must be logged in to post a comment Login