Connect with us

MANGALORE

ಇಂದಿನಿಂದ ಅದಾನಿ ಗುಂಪಿನ ನಿರ್ವಹಣೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ

ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನನಿಲ್ದಾಣದ ನಿರ್ವಹಣೆ ಹೊಣೆ ಇಂದಿನಿಂದ ಅದಾನಿ ಗುಂಪಿನ ಪಾಲಾಗಲಿದೆ, ಮಂಗಳೂರು ವಿಮಾನ ನಿಲ್ದಾಣವನ್ನು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ಅಕ್ಟೋಬರ್ 31 ರಂದು ಅದಾನಿ ಸಂಸ್ಥೆಗೆ ಹಸ್ತಾಂತರಿಸುತ್ತಿದೆ.

50 ವರ್ಷಗಳ ಒಪ್ಪಂದ ಇದಾಗಿದ್ದು, ವಿಮಾನ ನಿಲ್ದಾಣಗಳ ನಿರ್ವಹಣೆ, ಟರ್ಮಿನಲ್‌ಗಳ ಅಭಿವೃದ್ಧಿ, ಗ್ರಾಹಕ ಸ್ನೇಹಿ ಯೋಜನಗಳು ಮೊದಲಾದ ಜವಾಬ್ದಾರಿಗಳನ್ನು ಖಾಸಗಿ ಕಂಪನಿ ನಿರ್ವಹಿಸಬೇಕಿದೆ. ಆದರೆ ತಾಂತ್ರಿಕ ನಿರ್ವಹಣೆಯನ್ನು ಮಾತ್ರ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವೇ ನಿರ್ವಹಿಸಲಿದೆ.

Facebook Comments

comments