LATEST NEWS
ಅಕ್ರಮ ಚಿನ್ನ ಸಾಗಾಟಕ್ಕೆ ಸಹಾಯ ಮಂಗಳೂರು ವಿಮಾನ ನಿಲ್ದಾಣದ ಅಧಿಕಾರಿ ಬಂಧನ
ಅಕ್ರಮ ಚಿನ್ನ ಸಾಗಾಟಕ್ಕೆ ಸಹಾಯ ಮಂಗಳೂರು ವಿಮಾನ ನಿಲ್ದಾಣದ ಅಧಿಕಾರಿ ಬಂಧನ
ಮಂಗಳೂರು ಸೆಪ್ಟೆಂಬರ್ 21: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟಕ್ಕೆ ಬೆಂಬಲ ನೀಡುತ್ತಿದ್ದ ಆರೋಪದ ಮೇಲೆ ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರನ್ನು ಬಂಧಿಸಲಾಗಿದೆ. ಬಂಧಿತ ಅಧಿಕಾರಿಯ ಮನೆಯಿಂದ 25 ಲಕ್ಷ ರೂಪಾಯಿ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.
ಇಂದು ದುಬೈಯಿಂದ ಮಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರು ಸುಮಾರು 47 ಲಕ್ಷ ಬೆಲೆಬಾಳುವ ಚಿನ್ನವನ್ನು ಅಕ್ರಮವಾಗಿ ಸಾಗಿಸಲು ಪ್ರಯತ್ನಿಸುವಾಗ ಮಂಗಳೂರು ಡಿಐರ್ ಐ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದಿದ್ದ, ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆಸಿದಾಗ ಮಂಗಳೂರು ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಭಾಗಿಯಾಗಿರುವುದು ತಿಳಿದು ಬಂದಿದೆ.
ಈ ಹಿನ್ನಲೆಯಲ್ಲಿ ಡಿಆರ್ ಐ ಅಧಿಕಾರಿಗಳು ಅಧಿಕಾರಿಯನ್ನು ವಿಚಾರಣೆಗೊಳಪಡಿಸಿದಾಗ ಅಕ್ರಮ ಚಿನ್ನ ಸಾಗಾಟಕ್ಕೆ ಸಂಬಂದಿಸಿದಂತೆ ಮಹತ್ವದ ದಾಖಲೆಗಳು ದೊರೆತಿವೆ. ಅಲ್ಲದೆ ಅಧಿಕಾರಿಯ ಮನೆಯಲ್ಲಿ ತನಿಖೆ ನಡೆಸಿದಾಗ ಸುಮಾರು 25 ಲಕ್ಷ ರೂಪಾಯಿ ನಗದು ದೊರೆತಿದೆ. ಈ ಹಣ ಅಕ್ರಮ ಚಿನ್ನ ಸಾಗಾಟಕ್ಕೆ ಸಂಬಂಧಿಸಿದ ನಗದು ಎಂದು ಹೇಳಲಾಗಿದ್ದು, ಆರೋಪಿ ಅಧಿಕಾರಿಯನ್ನು ಡಿಆರ್ ಐ ಅಧಿಕಾರಿಗಳು ಬಂಧಿಸಿದ್ದಾರೆ.
ಇದಕ್ಕೂ ಮೊದಲು ದುಬೈಯಿಂದ ಮಂಗಳೂರಿಗೆ ಆಗಮಿಸಿದ್ದ ಕಾಸರಗೋಡು ನಿವಾಸಿ ನಿಝರ್ ಖಾದರ್ ಮುಲ್ಲೇರಿಯಾ ದುಬೈಯಿಂದ ಸುಮಾರು 1515 .20 ಗ್ರಾಂ ನಷ್ಟು 24 ಕ್ಯಾರೆಟ್ ಚಿನ್ನವನ್ನು 12 ಚಿನ್ನದ ಬಿಸ್ಕೆಟ್ ಬಾರ್ ರೀತಿಯಲ್ಲಿ ಮೊಬೈಲ್ ನ ಕವರ್ ನಲ್ಲಿ ಅಡಗಿಸಿ ಅಕ್ರಮ ಸಾಗಾಟಕ್ಕೆ ಪ್ರಯತ್ನಿಸಿದ್ದಾನೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಡಿಆರ್ ಐ ಅಧಿಕಾರಿಗಳು ಕಾಸರಗೋಡು ನಿವಾಸಿ ನೀಝರ್ ಖಾದರ್ ಮುಲ್ಲೇರಿಯಾ ಅವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 47 ಲಕ್ಷ ಬೆಲೆ ಬಾಳುವ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.