LATEST NEWS
ಮಂಗಳೂರು : ಹಿರಿಯ ವಕೀಲರ ಮೇಲೆ ಹಲ್ಲೆ, ವಕೀಲರ ಸಂಘದಿಂದ ತೀವ್ರ ಖಂಡನೆ, ಕಠಿಣ ಕ್ರಮಕ್ಕೆ ಆಗ್ರಹ
ಮಂಗಳೂರು : ಮಂಗಳೂರಿನ ಹಿರಿಯ ವಕೀಲರ ಮೇಲೆ ಹಲ್ಲೆ ನಡೆದಿದ್ದು ವಕೀಲರ ಸಂಘದಿಂದ ತೀವ್ರ ಖಂಡನೆ ವ್ಯಕ್ತವಾಗಿದೆ ಜೊತೆಗೆ ಹಲ್ಲೆ ಮಾಡಿದವರ ಮೇಲೆ ಕಠಿಣ ಕ್ರಮಕ್ಕೆ ಆಗ್ರಹಿಸಲಾಗಿದೆ.
ಮಂಗಳೂರು ವಕೀಲರ ಸಂಘದ ಹಿರಿಯ ವಕೀಲರಾದ ಕೆ ಶಂಭು ಶರ್ಮ ಇವರು ತಮ್ಮ ಕರ್ತವ್ಯ ನಿಮಿತ್ತ ತಮ್ಮ ಕಕ್ಷಿದಾರರಾದ ಡಾ. ರಾಜನೀಶ್ ಸೊರಕೆ ಇವರ ಸ್ಥಳದ ವೀಕ್ಷಣೆಗೆ ಹೋದ ಸಂದರ್ಭದಲ್ಲಿ ಚಂದ್ರಹಾಸ ಶ್ರೀಯನ್ ಎಂಬುವವನು ಅವ್ಯಾಚ ಶಬ್ದಗಳಿಂದ ಬೈದು ಹಲ್ಲೆ ಮಾಡಿದ ಹಿನ್ನೆಲೆಯಲ್ಲಿ ಆತನ ಮೇಲೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ವಕೀಲರ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಯ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಮಂಗಳೂರು ವಕೀಲರ ಸಂಘ ಆಗ್ರಹಿಸುತ್ತದೆ, ಹಾಗೂ ವಕೀಲರ ಮೇಲೆ ಹಲ್ಲೆಯ ಪ್ರಕರಣವು ಮರುಕಳಿಸದಂತೆ ಕ್ರಮ ಕೈಗೊಳ್ಳುವಂತೆ ಮಂಗಳೂರು ವಕೀಲರ ಸಂಘ ಒತ್ತಾಯಿಸಿ, ಪ್ರಕರಣವನ್ನು ತೀವ್ರವಾಗಿ ಖಂಡಿಸುತ್ತದೆ ಎಂದು ಮಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ರಾಘವೇಂದ್ರ ಎಚ್ ವಿ ಹಾಗೂ ಪ್ರಧಾನ ಕಾರ್ಯದರ್ಶಿ ಶ್ರೀಧರ್ ಎಚ್ ಅವರು ಆಗ್ರಹಿಸಿರುತ್ತಾರೆ .