LATEST NEWS
ಜುಲೈ 20 ಹಾಗೂ 21 ರಂದು ಮಂಗಳೂರು – ಬೆಂಗಳೂರು ನಡುವಿನ ರೈಲು ಸಂಚಾರ ರದ್ದು

ಜುಲೈ 20 ಹಾಗೂ 21 ರಂದು ಮಂಗಳೂರು – ಬೆಂಗಳೂರು ನಡುವಿನ ರೈಲು ಸಂಚಾರ ರದ್ದು
ಮಂಗಳೂರು ಜುಲೈ 20: ಜುಲೈ 20 ಹಾಗೂ 21 ರಂದು ಮಂಗಳೂರು- ಬೆಂಗಳೂರು ನಡುವಿನ ರೈಲು ಸಂಚಾರವನ್ನು ರದ್ದುಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆ ತಿಳಿಸಿದೆ. ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆ ಸಿರಿಬಾಗಿಲು ರೈಲ್ವೇ ಹಳಿಗೆ ಬೆಟ್ಟದಿಂದ ಭಾರಿ ಪ್ರಮಾಣದಲ್ಲಿ ಕಲ್ಲುಗಳು ಬೀಳುತ್ತಿದೆ.
ಈ ಹಿನ್ನಲೆಯಲ್ಲಿ ಶಿರಾಡಿ ಘಾಟ್ ರೈಲು ಮಾರ್ಗದ ಸಿರಿಬಾಗಿಲು ಸಮೀಪದ ಮಣಿಭಂಡ ಬಳಿ ರೈಲು ಹಳಿಗಳ ಬಳಿ ಇರುವ ಅಪಾಯಕಾರಿ ಬಂಡೆಯನ್ನು ತೆರವುಗೊಳಿಸುವ ಸಲುವಾಗಿ ಎರಡು ದಿನ ರೈಲು ಸಂಚಾರ ಸ್ಥಗಿತಗೊಳಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ.

ಕರಾವಳಿಯಲ್ಲಿ ಕಳೆದೆರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಇನ್ನು 2 ಮೂರು ದಿನ ಇದೇ ರೀತಿ ಮಳೆ ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ನಡುವೆ ಘಾಟಿ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಶಿರಾಢಿ ಘಾಟ್ ರೈಲ್ವೆ ಮಾರ್ಗದ ಸಿರಿಬಾಗಿಲ ಬಳಿ ಇರುವ ಈ ಅಪಾಯಕಾರಿ ಬಂಡೆ ಯಾವುದೇ ಕ್ಷಣದಲ್ಲಿ ರೈಲು ಹಳಿಯ ಮೇಲೆ ಉರುಳಿ ಬಿಳುವ ಸಾಧ್ಯತೆಯಿರುವ ಹಿನ್ನಲೆಯಲ್ಲಿ ರೈಲ್ವೆ ಇಲಾಖೆ ಮುನ್ನೆಚ್ಚರಿಕೆ ಕ್ರಮವಾಗಿ ಬಂಡೆ ತೆರವಿಗೆ ಸಿದ್ದತೆ ನಡೆಸಿದೆ. ಈ ಹಿನ್ನಲೆಯಲ್ಲಿ ಈ ಮಾರ್ಗದಲ್ಲಿ ಸಂಚರಿಸುವ ಮಂಗಳೂರು ಬೆಂಗಳೂರು ರೈಲುಗಳನ್ನು ಈ ಎರಡು ದಿನ ರದ್ದುಗೊಳಿಸಿದೆ.