LATEST NEWS
ಗಿರಿಗಿಟ್ ಪ್ರದರ್ಶನಕ್ಕೆ ತಡೆಯಾಜ್ಞೆ ಸಾಮಾಜಿಕ ಜಾಲತಾಣದಲ್ಲಿ ನಿಂದನೆ ವಿರುದ್ದ ವಕೀಲರ ಸಂಘದಿಂದ ದೂರು
ಗಿರಿಗಿಟ್ ಪ್ರದರ್ಶನಕ್ಕೆ ತಡೆಯಾಜ್ಞೆ ಸಾಮಾಜಿಕ ಜಾಲತಾಣದಲ್ಲಿ ನಿಂದನೆ ವಿರುದ್ದ ವಕೀಲರ ಸಂಘದಿಂದ ದೂರು
ಮಂಗಳೂರು ಸೆಪ್ಟೆಂಬರ್ 13: ವಕೀಲರು ಹಾಗೂ ನ್ಯಾಯಂಗದ ಅವಹೇಳನ ಮಾಡಲಾಗಿದೆ ಎಂದು ತುಳು ಚಿತ್ರ ಗಿರಿಗಿಟ್ ಪ್ರದರ್ಶನಕ್ಕೆ ತಡೆಯಾಜ್ಞೆ ತಂದ ಮಂಗಳೂರು ವಕೀಲರ ಸಂಘದ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ ನಿಂದನೆ ಮಾಡಲಾಗುತ್ತಿದೆ ಎಂದು ವಕೀಲ ಸಂಘ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ವಕೀಲರ ಸಂಘದ ನಿಯೋಗ ಮಂಗಳೂರು ಪೊಲೀಸ್ ಆಯುಕ್ತ ಹರ್ಷ ಅವರಿಗೆ ಮನವಿ ಮಾಡಿದೆ. ಜೊತೆಗೆ, ಮಂಗಳೂರು ಬಂದರು ಪೊಲೀಸ್ ಠಾಣೆಗೆ ಈ ಬಗ್ಗೆ ಲಿಖಿತ ದೂರು ನೀಡಿದ್ದು, ವಿಕ್ಷಿಪ್ತ ಹಾಗೂ ವಿಕೃತ ಟೀಕೆಗಳನ್ನು ಬರೆದು ಸಾಮಾಜಿಕ ಸ್ವಾಸ್ಥ್ಯ ಕದಡಿದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ.
ವಕೀಲರ ಸಂಘದ ಬಗ್ಗೆ ಮತ್ತು ತಡೆಯಾಜ್ಞೆ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ್ದ ಪ್ರಧಾನ ಕಾರ್ಯದರ್ಶಿ ಎಚ್.ವಿ. ರಾಘವೇಂದ್ರ ಸಹಿತ ಗಣ್ಯರ ಬಗ್ಗೆ ಅವಾಚ್ಯ ಹಾಗೂ ಕೀಳು ಅಭಿರುಚಿಯ ನಿಂದನೆ ಮಾಡಿರುವ ಕೆಲವು ವ್ಯಕ್ತಿಗಳು ಮತ್ತು ಸ್ಕ್ರೀನ್ ಶಾಟ್‌ಗಳನ್ನು ವಕೀಲರು ಪೊಲೀಸರಿಗೆ ನೀಡಿದ್ದಾರೆ.
ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು. ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ಷೇಪಾರ್ಹ ಸಂದೇಶಗಳನ್ನು ಹಾಕಿದವರನ್ನು, ಅದನ್ನು ಫಾರ್ವರ್ಡ್ ಮಾಡಿದವರನ್ನು ಮತ್ತು ಅದಕ್ಕೆ ಬೆಂಬಲಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಹರ್ಷ ಮತ್ತು ಬಂದರು ಪೊಲೀಸರು ವಕೀಲರ ನಿಯೋಗಕ್ಕೆ ಭರವಸೆ ನೀಡಿದ್ದಾರೆ.