LATEST NEWS
ಪತನಗೊಂಡ ಏರ್ ಇಂಡಿಯಾ ವಿಮಾನದಲ್ಲಿದ್ದ ಮಂಗಳೂರು ಮೂಲದ ಕೋ ಪೈಲಟ್ ಕ್ಲೈವ್ ಕುಂದರ್ ಸಾವು

ಮಂಗಳೂರು ಜೂನ್ 12: ಗುಜರಾತ್ ನ ಅಹಮದಾಬಾದ್ ನಲ್ಲಿ ಪತನಗೊಂಡ ಏರ್ ಇಂಡಿಯಾ ವಿಮಾನದ ಪೈಲೆಟ್ ಆಗಿ ಮಂಗಳೂರು ಮೂಲದ ಕ್ಲೈವ್ ಕುಂದರ್ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಪ್ರಸಕ್ತ ಮುಂಬೈ ನಿವಾಸಿಯಾಗಿರುವ ಕ್ಲೈವ್ ಕುಂದರ್ ಏರ್ ಇಂಡಿಯಾ ಬೋಯಿಂಗ್ 787 ಡ್ರೀಮ್‌ಲೈನರ್ ವಿಮಾನದಲ್ಲಿ ಫಸ್ಟ್ ಆಫೀಸರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಈ ವಿಮಾನವು ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಗುರುವಾರ ಮಧ್ಯಾಹ್ನ 1:38 ಕ್ಕೆ ಟೇಕ್ ಆಫ್ ಆಗಿತ್ತು. 1,100 ಗಂಟೆಗಳ ಹಾರಾಟದ ಅನುಭವವನ್ನು ಹೊಂದಿದ್ದ ಕ್ಲೈವ್ ಕುಂದರ್ ಅವರು, 8,200 ಗಂಟೆಗಳಿಗೂ ಹೆಚ್ಚು ಹಾರಾಟದ ಟ್ರೈನೀ ಕ್ಯಾಪ್ಟನ್ ಕ್ಯಾಪ್ಟನ್ ಸುಮೀತ್ ಸಭರ್ವಾಲ್ ಅವರ ಜೊತೆ ಕಾರ್ಯನಿರ್ವಹಿಸುತ್ತಿದ್ದರು.

ಕ್ಲೈವ್ ಕುಂದರ್ ಮುಂಬೈನಲ್ಲಿ ನೆಲೆಸಿದ್ದು ಫ್ರಾನ್ಸ್ ರಾಜಧಾನಿ ಪ್ಯಾರಿಸ್‌ನಲ್ಲಿ ತರಬೇತಿ ಪಡೆದಿದ್ದರು. ಒಟ್ಟು 1,100 ಗಂಟೆಗಳ ವಿಮಾನ ಹಾರಾಟದ ಅನುಭವವನ್ನು ಹೊಂದಿದ್ದರು. ಅಹಮದಾಬಾದ್‌ನಿಂದ ಲಂಡನ್‌ಗೆ ಮಧ್ಯಾಹ್ನ 1:39ಕ್ಕೆ ಟೇಕಾಫ್ ಆಗಿದ್ದ ಏರ್ ಇಂಡಿಯಾ ವಿಮಾನ ತಾಂತ್ರಿಕ ದೋಷದಿಂದ ಪತನಗೊಂಡು ಸಮೀಪದ ಮೇಘನಿ ನಗರದ ವಸತಿ ಪ್ರದೇಶದಲ್ಲಿವ ಮೆಡಿಕಲ್ ಹಾಸ್ಟೆಲ್‌ನ ಅಡುಗೆ ಮನೆ ಮೇಲೆ ಬಿದ್ದಿದೆ. ಇಬ್ಬರು ಪೈಲಟ್, 10 ಸಿಬ್ಬಂದಿ ಸೇರಿ ಒಟ್ಟು 242 ಮಂದಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಈಗಾಗಲೇ 130ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು ಸಾವಿನ ಸಂಖ್ಯೆ ಕ್ಷಣ ಕ್ಷಣಕ್ಕೂ ಏರಿಕೆ ಆಗುತ್ತಿದೆ.
1 Comment