LATEST NEWS
ಮಂಗಳೂರು – ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಸ್ಕೂಟರ್ ಇಬ್ಬರು ಬಾಲಕರ ಸಾವು

ಮಂಗಳೂರು, ಜೂ 28: ಸ್ಕೂಟರ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸಾವನಪ್ಪಿರುವ ಘಟನೆ ಪದವಿನಂಗಡಿಯ ವಿಕಾಸ್ ಕಾಲೇಜು ಸಮೀಪ ನಡೆದಿದೆ.
ಸ್ಕೂಟರ್ ಸವಾರನ ನಿಯಂತ್ರಣ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಡಿಕ್ಕಿಯ ರಭಸಕ್ಕೆ ಓರ್ವ ಯುವಕ ಸ್ಥಳದಲ್ಲಿ ಮೃತಪಟ್ಟಿದ್ದಾನೆ. ಮತ್ತೋರ್ವ ಆಸ್ಪತ್ರೆಗೆ ರವಾನಿಸುವ ಸಂದರ್ಭ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಮೃತರನ್ನು ಸ್ಥಳೀಯ ನಿವಾಸಿಗಳಾದ ಪವನ್ ( 16) ಹಾಗೂ ಚಿರಾಗ್ ( 15) ಎಂದು ಗುರುತಿಸಲಾಗಿದೆ.

ಅಪಘಾತದಿಂದ ಒಬ್ಬ ಬಾಲಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದ. ಗಾಯಗೊಂಡ ಇನ್ನೊಬ್ಬ ಬಾಲಕನನ್ನು ರಾಜಲಕ್ಷ್ಮೀ ಬಸ್ಸಿನಲ್ಲಿ ತಕ್ಷಣವೇ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆ ತಲುಪುವಷ್ಟರಲ್ಲಿ ಆತನೂ ಮೃತಪಟ್ಟಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ