LATEST NEWS
ಮಂಗಳೂರು ದೋಣಿ ದುರಂತ ಇಬ್ಬರ ಮೃತದೇಹ ಪತ್ತೆ – ನಾಪತ್ತೆಯಾದವರಿಗಾಗಿ ತೀವ್ರ ಶೋಧ
ಮಂಗಳೂರು ಡಿಸೆಂಬರ್ 1: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ದೋಣಿ ದುರಂತ ಪ್ರಕರಣದಲ್ಲಿ ಇಬ್ಬರ ಮೃತದೇಹವನ್ನು ಮುಳುಗುತಜ್ಞರು ಮೆಲಕ್ಕೆ ಎತ್ತಿದ್ದಾರೆ. ನಾಪತ್ತೆಯಾದ 6 ಜನ ಮೀನುಗಾರರಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಇನ್ನು ನಾಲ್ವರ ನಾಪತ್ತೆಯಾಗಿದ್ದಾರೆ.
ಪತ್ತೆಯಾದ ಮೃತದೇಹಳನ್ನು ಪಾಂಡುರಂಗ ಸುವರ್ಣ, ಪ್ರೀತಂ ಎಂದು ಗುರುತಿಸಲಾಗಿದ್ದು, ಇಬ್ಬರೂ ಮಂಗಳೂರಿನ ಬೊಕ್ಕಪಟ್ನ ನಿವಾಸಿಗಳು ಎಂದು ತಿಳಿದು ಬಂದಿದ್ದು, ಮತ್ತೆ ನಾಪತ್ತೆಯಾದ ಝಿಯಾವುಲ್ಲ(32), ಅನ್ಸಾರ್ (31), ಹಸೈನಾರ್ (25), ಚಿಂತನ್ (21) ಅವರಿಗಾಗಿ ಶೋಧ ಕಾರ್ಯ ಮುಂದುವರೆಸಲಾಗಿದೆ.
ಸೋಮವಾರ ನಸುಕಿನ ಜಾವ ಬೋಳಾರದ ಶ್ರೀ ರಕ್ಷಾ ಮೀನುಗಾರಿಕಾ ಬೋಟ್ನಲ್ಲಿ 22 ಮಂದಿ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದು ರಾತ್ರಿ ವಾಪಾಸ್ ಬರಬೇಕಾಗಿತ್ತು. ಆದರೆ ಉಳ್ಳಾಲದ ಪಶ್ಚಿಮ ಭಾಗದ ಹಲವು ನಾಟಿಕಲ್ ಮೈಲ್ ದೂರದಲ್ಲಿ ದೋಣಿ ಮಗುಚಿ ಬಿದ್ದಿದೆ. 19 ಮಂದಿಯನ್ನು ರಕ್ಷಿಸಲಾಗಿದ್ದು ಆರು ಮಂದಿ ನಾಪತ್ತೆಯಾಗಿದ್ದರು. ಈ ಪೈಕಿ ಇಬ್ಬರ ಮೃತ ದೇಹ ಲಭಿಸಿದೆ. ಇನ್ನುಳಿದ ನಾಲ್ವರಿಗಾಗಿ ಶೋಧ ಕಾರ್ಯ ನಡೆಯುತ್ತಲಿದೆ.
ಮೀನಿನ ಸಂಗ್ರಹ ಅಧಿಕವಾದ ಹಾಗೂ ಭಾರೀ ಗಾಳಿ ಬೀಸಿದ ಪರಿಣಾಮ ಈ ದೋಣಿ ದುರಂತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.
Facebook Comments
You may like
-
ಪ್ಲಾಸ್ಟಿಕ್ ಬ್ಯಾಗ್ ನಲ್ಲಿ ಕೊಳೆತ ಭ್ರೂಣದ ಅವಶೇಷ ಪತ್ತೆ..!!
-
ಬಿಯರ್ ತುಂಬಿದ್ದ ಲಾರಿ ಪಲ್ಟಿ…ಬಿಯರ್ ಬಾಟಲ್ ಗಳಿಗೆ ಮುಗಿಬಿದ್ದ ಮದ್ಯಪ್ರಿಯರು
-
ಗೂಗಲ್ ಮ್ಯಾಪ್ ನಂಬಿ ಗಲ್ಲಿಗೆ ನುಗ್ಗಿದ ಬಸ್ – 11 ಕೆವಿ ವಿದ್ಯುತ್ ತಂತಿ ತಗುಲಿ 11 ಮಂದಿ ಸಜೀವ ದಹನ
-
ಖಾಸಗಿ ಬಸ್ ನಲ್ಲಿ ಲೈಂಗಿಕ ಕಿರುಕುಳ..ಆರೋಪಿ ಪತ್ತೆಗೆ ವಿಶೇಷ ತಂಡ
-
ಮಂಗಳೂರು ಬಸ್ ನಲ್ಲಿ ಲೈಂಗಿಕ ಕಿರುಕುಳ: ಯುವತಿ ಮಾಡಿದ ಪೋಸ್ಟ್ ವೈರಲ್
-
ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ: ಆತ್ಮಹತ್ಯೆ ಶಂಕೆ
You must be logged in to post a comment Login