ಮಂಗಳೂರು ಡಿಸೆಂಬರ್ 08: ಮಂಗಳೂರಿನ ವಾಮಂಜೂರಿನಲ್ಲಿ ಖಾಸಗಿ ಕಾಲೇಜಿನಲ್ಲಿ ವಿಧ್ಯಾರ್ಥಿಗಳು ಬುರ್ಖಾ ಧರಿಸಿ ನೃತ್ಯ ಪ್ರದರ್ಶನ ಮಾಡಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹಿನ್ನಲೆ ಕಾಲೇಜು ಡ್ಯಾನ್ಸ್ ಮಾಡಿದ್ದ ನಾಲ್ವರು ವಿಧ್ಯಾರ್ಥಿಗಳು ಸಸ್ಪೆಂಡ್ ಮಾಡಿ ಆಂತರಿಕ ತನಿಖೆಗೆ ಆದೇಶಿಸಿದೆ.


ಬುರ್ಖಾ ಧರಿಸಿ ವಿಧ್ಯಾರ್ಥಿಗಳು ನೃತ್ಯ ಮಾಡಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ಮುಸ್ಲೀಂ ಧರ್ಮವನ್ನು ಅವಹೇಳನ ಮಾಡಲಾಗುತ್ತಿದೆ ಎಂಬ ಅರ್ಥದಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿದ ಕಾಲೇಜು ಆಡಳಿತ ಮಂಡಳಿ, ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಮುಸ್ಲಿಂ ವಿಧ್ಯಾರ್ಥಿಗಳೇ ಬುರ್ಖಾ ಧರಿಸಿ ನೃತ್ಯ ಮಾಡಿದ್ದಾರೆ ಎಂದು ಸ್ಪಷ್ಟನೆ ನೀಡಿದೆ.

ಅಲ್ಲದೆ ನೃತ್ಯ ಪ್ರದರ್ಶಿಸಿದ ವಿಧ್ಯಾರ್ಥಿಗಳನ್ನು ಸಸ್ಪೆಂಡ್ ಮಾಡಿದೆ. ಕಾರ್ಯಕ್ರಮದ ಪ್ರಾರಂಭದಲ್ಲಿ ವಿಧ್ಯಾರ್ಥಿಗಳು ಅನುಮತಿ ಇಲ್ಲದೆ ಈ ನೃತ್ಯ ಪ್ರದರ್ಶಿಸಿದ್ದಾರೆ ಎಂದು ಕಾಲೇಜು ಮಂಡಳಿ ಹೇಳಿದೆ. ಶಾಲೆ ಕೋಮು ಸೌಹಾರ್ಧತೆ ಕದಡುವ ಯಾವುದೇ ರೀತಿಯ ಕಾರ್ಯಕ್ರಮಗಳಿಗೆ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದೆ.

Share Information