Connect with us

    LATEST NEWS

    ಮಂಗಳೂರು ನಗರದಲ್ಲಿ ಚೀನಾ ನಿರ್ಮಿತ ಸಿಸಿಟಿವಿ ಆಳವಡಿಕೆ – ಕಾಂಗ್ರೇಸ್ ಆರೋಪ

    ಮಂಗಳೂರು ಡಿಸೆಂಬರ್ 1: ಮಂಗಳೂರು ನಗರದಲ್ಲಿ ಕಮಾಂಡ್ ಕಂಟ್ರೋಲ್ ಸೆಂಟರ್‌ ಯೋಜನೆಯಡಿ ಚೀನಾ ನಿರ್ಮಿತ ಸಿಸಿಟಿವಿಗಳನ್ನು ಆಳವಡಿಸಲಾಗಿದೆ ಎಂದು ಪಾಲಿಕೆ ವಿಪಕ್ಷ ಸದಸ್ಯರು ಬಿಜೆಪಿಯನ್ನು ಟೀಕಿಸಿದ್ದಾರೆ.


    ಪಾಲಿಕೆ ಸಾಮಾನ್ಯ ಸಭೆಯಲ್ಲಿ ಈ ವಿಚಾರ ಪ್ರಸ್ತಾಪಿಸಿದ ವಿಪಕ್ಷ ಸದಸ್ಯರು ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕಮಾಂಡ್ ಕಂಟ್ರೋಲ್ ಸೆಂಟರ್‌ನ ಎರಡನೇ ಹಂತದ ₹ 32 ಕೋಟಿ ಮೊತ್ತದ ಕಾಮಗಾರಿಯ ಟೆಂಡರ್‌ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ. ಪಾಲಿಕೆ ಸಮಾನ್ಯ ಸಭೆಯಲ್ಲಿ ಈ ಕುರಿತು ಪ್ರಸ್ತಾಪಿಸಿದ ಕಾಂಗ್ರೆಸ್‌ನ ಎ.ಸಿ.ವಿನಯರಾಜ್‌, ‘ತಮಗೆ ಬೇಕಾದವರಿಗೆ ಟೆಂಡರ್‌ ನೀಡಲು ಷರತ್ತುಗಳನ್ನು ಸಡಿಲಗೊಳಿಸಲಾಗಿದೆ. ಮಧ್ಯಪ್ರದೇಶ ಸರ್ಕಾರ ಕಪ್ಪು ಪಟ್ಟಿಗೆ ಸೇರಿಸಿದ್ದ ಟೆಕ್ನೊಸಿಸ್‌ ಸೆಕ್ಯುರಿಟೀಸ್ ಪ್ರೈವೈಟ್ ಲಿಮಿಟೆಡ್ ಕಂಪನಿಗೆ ಟೆಂಡರ್‌ ನೀಡಲಾಗಿದೆ. ಈ ಕಾಮಗಾರಿಯ ಸಲಹೆಗಾರ ಸಂಸ್ಥೆಯಾದ ಸ್ಟೆಪ್ ಇನ್ ಸ್ಟೋನ್ ಕಂಪನಿಯೂ ಸ್ವತ ರಾಡಾರ್ ಹಾರ್ಡ್‍ವೇರ್ ವಿತರಣೆಯಲ್ಲಿ ತೊಡಗಿದ್ದು, ಇದು ಹಿತಾಸಕ್ತಿ ಸಂಘರ್ಷಕ್ಕೂ ಕಾರಣವಾಗಿದೆ. ಕಪ್ಪು ಪಟ್ಟಿಗೆ ಸೇರ್ಪಡೆಗೆ ಅನುಸರಿಸಲಾದ ಕ್ರಮ ಸರಿಯಿಲ್ಲ ಎಂಬ ಕಾರಣಕ್ಕೆ ಹೈಕೋರ್ಟ್‌ ಟೆಕ್ನೋಸಿಸ್‌ ಕಂಪನಿಯನ್ನು ಕಪ್ಪುಪಟ್ಟಿಯಿಂದ ಕೈಬಿಡುವಂತೆ ಆದೇಶ ಮಾಡಿತ್ತು. ಅದನ್ನೇ ನೆಪವನ್ನಾಗಿಸಿ ಆ ಕಂಪನಿಗೇ ಟೆಂಡರ್‌ ನೀಡಲಾಗಿದೆ. ಆದರೆ, ಆ ಸಂಸ್ಥೆಯು ಈ ಕಾಮಗಾರಿಯ ಟೆಂಡರ್ ಪಡೆಯುವ ಅರ್ಹತೆಯನ್ನೇ ಹೊಂದಿಲ್ಲ’ ಎಂದು ವಿವರಿಸಿದರು. ‘ಈ ಕಂಪನಿಯು ಟೆಂಡರ್‌ ಷರತ್ತಿನಲ್ಲಿ ಉಲ್ಲೇಖಿಸಿದ ಸಿ.ಸಿ.ಟಿ.ವಿ. ಕ್ಯಾಮೆರಾಗಳ ಬದಲು ಚೀನಾ ನಿರ್ಮಿತ ಸಿ.ಸಿ.ಟಿ.ವಿ. ಕ್ಯಾಮೆರಾಗಳನ್ನು ಅಳವಡಿಸಿದೆ. ಇದನ್ನೂ ಅಧಿಕಾರಿಗಳು ಪರಿಶೀಲಿಸಿಲ್ಲ. ಅಮೆರಿಕ ಹಾಗೂ ಇಂಗ್ಲೆಂಡ್‍ ದೇಶಗಳು ಭದ್ರತೆಯ ಕಾರಣಕ್ಕಾಗಿ ಈ ಕ್ಯಾಮೆರಾಗಳನ್ನು ತಮ್ಮ ದೇಶದಲ್ಲಿ ನಿಷೇಧಿಸಿವೆ. ಅಂತಹ ಸಂಸ್ಥೆಗೆ ನಗರದಲ್ಲಿ ರತ್ನಗಂಬಳಿ ಹಾಸಲಾಗಿದೆ’ ಎಂದು ಟೀಕಿಸಿದರು. ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply