LATEST NEWS
ಮಂಗಳೂರು ಸೆಂಟ್ರಲ್ ಮಾರ್ಕೆಟ್ ತೆರೆಯದಂತೆ ತಡೆಯೊಡ್ಡಿದ ಮಹಾನಗರಪಾಲಿಕೆ
ಸೆಂಟ್ರಲ್ ಮಾರುಕಟ್ಟೆ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್
ಮಂಗಳೂರು, ಜೂ.9: ಲಾಕ್ ಡೌನ್ ಸಂದರ್ಭ ಬೈಕಂಪಾಡಿ ಎಪಿಎಂಸಿ ಯಾರ್ಡ್ ಗೆ ಸ್ಥಳಾಂತರಗೊಂಡಿದ್ದ ಸೆಂಟ್ರಲ್ ಮಾರುಕಟ್ಟೆ ವ್ಯಾಪಾರಿಗಳು ಇಂದು ಮತ್ತೆ ಸೆಂಟ್ರಲ್ ಮಾರುಕಟ್ಟೆಗೆ ಮರಳು ಪ್ರಯತ್ನಕ್ಕೆ ಮಂಗಳೂರು ಮಹಾನಗರಪಾಲಿಕೆ ತಡೆಯೊಡ್ಡಿದ ಘಟನೆ ಇಂದು ನಡೆದಿದೆ.
ಇಂದು ಬೆಳಿಗ್ಗೆಯಿಂದಲೇ ನೂರಾರು ವ್ಯಾಪಾರಸ್ಥರು ಮಂಗಳೂರು ಸೆಂಟ್ರಲ್ ಮಾರ್ಕೆಟ್ ಬಳಿ ಜಮಾಯಿಸಿದ್ದರು. ಈ ಹಿನ್ನಲೆ ಮಾರುಕಟ್ಟೆಯನ್ನು ತೆರೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
ಈ ನಡುವೆ ಮನಪಾ ಉಪ ಆಯುಕ್ತ ಡಾ.ಸಂತೋಷ್ ಕುಮಾರ್ ಸಹಿತ ಅಧಿಕಾರಿಗಳು ವ್ಯಾಪಾರಿಗಳ ಮನವೊಲಿಸುವ ಪ್ರಯತ್ನಗಳನ್ನು ನಡೆಸಿದ್ದರು. ಈ ಸಂದರ್ಭ ಅಧಿಕಾರಿಗಳು ಮತ್ತು ವ್ಯಾಪಾರಸ್ಥರ ನಡುವೆ ಮಾತಿನ ಚಕಮಕಿ ಈ ಸಂದರ್ಭದಲ್ಲಿ ನಡೆದಿದೆ.
ನೂರಾರು ಪೊಲೀಸರು ಈ ಸಂದರ್ಭದಲ್ಲಿ ಸೆಂಟ್ರಲ್ ಮಾರ್ಕೆಟ್ ಸುತ್ತ ಬ್ಯಾರಿಕೇಡ್ ಹಾಕಿ ವ್ಯಾಪಾರಸ್ಥರು ಮಾರುಕಟ್ಟೆಗೆ ತೆರಳದಂತೆ ಬಂದೋಬಸ್ತ್ ಕಲ್ಪಿಸಿದ್ದರು.
ಈಗಾಗಲೇ ಲಾಕ್ ಡೌನ್ ಸಡಿಲಿಕೆಯಿಂದ ಎಲ್ಲಾ ಕಡೆ ವ್ಯಾಪಾರ ವಹಿವಾಟುಗಳು ಆರಂಭವಾಗಿರುವುದರಿಂದ ನಗರದ ಸೆಂಟ್ರಲ್ ಮಾರುಕಟ್ಟೆಯಲ್ಲಿ ಮಂಗಳವಾರದಿಂದ ವ್ಯಾಪಾರ ನಡೆಸುವುದಾಗಿ ಮಾರುಕಟ್ಟೆ ವ್ಯಾಪಾರಸ್ಥರ ಸಂಘ ಸೋಮವಾರ ತಿಳಿಸಿತ್ತು. ಅದರಂತೆ ಮಂಗಳವಾರ ಬೆಳಗ್ಗೆ ಸೆಂಟ್ರಲ್ ಮಾರುಕಟ್ಟೆ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಮುಸ್ತಫ ನೇತೃತ್ವದಲ್ಲಿ ವ್ಯಾಪಾರಸ್ಥರು ಮಾರುಕಟ್ಟೆಗೆ ಆಗಮಿಸಿದ್ದರು.