Connect with us

    LATEST NEWS

    ಮಂಗಳೂರಿನಲ್ಲಿ ಚಡ್ಡಿಗ್ಯಾಂಗ್ ಹಾವಳಿ – ಕೋಡಿಕಲ್ ನಲ್ಲಿ ಮನೆಯೊಂದರ ಕಿಟಕಿ ಗ್ರಿಲ್ಸ್ ಕತ್ತರಿಸಿದ ಕಳ್ಳತನಕ್ಕೆ ಯತ್ನಿಸಿದ ಕಳ್ಳರು

    ಮಂಗಳೂರು ಜುಲೈ 07: ಮಂಗಳೂರಿನಲ್ಲಿ ಒಂದೆಡೆ ಮುಂಗಾರು ಮಳೆ ಅಬ್ಬರವಿದ್ದರೆ ಇನ್ನೊಂದೆಡೆ ಕಳ್ಳರ ಭಯ ಪ್ರಾರಂಭವಾಗಿದ್ದು, ಕಳ್ಳತನಕ್ಕೆ ಹೆಸರು ಮಾಡಿರುವ ಚೆಡ್ಡಿ ಗ್ಯಾಂಗ್ ನಗರದಲ್ಲಿ ಕಾಣಿಸಿಕೊಂಡಿದೆ. ಅಲ್ಲದೆ ಕೋಡಿಕಲ್ ನಲ್ಲಿ ನಿನ್ನೆ ರಾತ್ರಿ ಮನೆಯೊಂದರ ಕಿಟಕಿ ಗ್ರಿಲ್ಸ್ ಕತ್ತರಿಸಿ ಕಳ್ಳರು ಮನೆಗೆ ನುಗ್ಗಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ ಘಟನೆ ನಡೆದಿದೆ.ಈ ಕೃತ್ಯವನ್ನು ಹೊರ ರಾಜ್ಯದ ಚಡ್ಡಿ ಗ್ಯಾಂಗ್ ನಡೆಸಿರುವ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.


    ಕಳ್ಳರು ಮನೆಯ ಕಿಟಕಿ ಕತ್ತರಿಸುವುದಕ್ಕೂ ಮುನ್ನ ಕೋಡಿಕಲ್ ಪರಿಸರದಲ್ಲಿ ಅಡ್ಡಾಡುವುದು ಸಿಸಿಟಿವಿಯಲ್ಲಿ ದಾಖಲಾಗಿದೆ. ಐವರಿದ್ದ ಕಳ್ಳರ ತಂಡ ಮೆಲ್ಲನೆ ಹೆಜ್ಜೆ ಇಡುತ್ತಾ ಕೈಯಲ್ಲಿ ಟಾರ್ಚ್ ಬೆಳಕು ಹರಿಸಿ ಕಳವಿಗೆ ಮನೆ ಹುಡುಕುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ‌. ಚಡ್ಡಿ ಹಾಕಿದ್ದ ಕಳ್ಳರ ಗ್ಯಾಂಗ್ ಸದಸ್ಯರು ಬರುತ್ತಿದ್ದಾಗಲೇ ನಾಯಿಗಳು ಜೋರಾಗಿ ಬೊಗಳಿದ್ದು ಅವುಗಳತ್ತ ಕಳ್ಳರು ಕಲ್ಲೆಸೆದು ಓಡಿಸಿದ್ದಾರೆ.


    ಕಿಟಕಿ ಕತ್ತರಿಸಿ ಒಂದು ಮನೆಯ ಒಳಗೆ ನುಗ್ಗಿದ್ದ ಕಳ್ಳರು ಬೆಲೆಬಾಳುವ ವಸ್ತುಗಳಿಗಾಗಿ ಜಾಲಾಡಿದ್ದಾರೆ. ಆದರೆ ಅವರಿಗೆ ಚಿಲ್ಲರೆ ನಗದು ಬಿಟ್ಟರೆ ಯಾವುದೇ ವಸ್ತುಗಳು ಸಿಕ್ಕಿಲ್ಲ. ವಿಶೇಷ ಅಂದ್ರೆ, ಮನೆಮಂದಿ ಮಲಗಿದ್ದಾಗಲೇ ಕಳ್ಳರು ನುಗ್ಗಿ ಹುಡುಕಾಟ ಮುಗಿಸಿ ಸದ್ದಿಲ್ಲದೆ ಹೊರಕ್ಕೆ ತೆರಳಿದ್ದಾರೆ. ಮನೆಯವರಿಗೆ ಬೆಳಗಾದಾಗಲೇ ಕಳವು ಕೃತ್ಯ ತಿಳಿದುಬಂದಿತ್ತು.

    Share Information
    Advertisement
    Click to comment

    You must be logged in to post a comment Login

    Leave a Reply