Connect with us

    DAKSHINA KANNADA

    ಮಂಗಳೂರು ಚಲೋ ಪ್ಲಾಪ್ ಶೋ : ಐವನ್ ಡಿಸೋಜಾ

    ಮಂಗಳೂರು, ಸೆಪ್ಟೆಂಬರ್ 09: ಸಮವಸ್ತ್ರದಲ್ಲಿದ್ದ ಓರ್ವ ಪೊಲೀಸ್ ಅಧಿಕಾರಿ ಮೇಲೆ ಹರಿಹಾಯ್ದ ಸಂಸದ ನಳೀನ್ ಕುಮಾರ್ ಕಟೀಲ್ ಅವರದ್ದು ನಾಚಿಕೆಗೇಡಿನ ವರ್ತನೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ ಕಿಡಿಕಾರಿದ್ದಾರೆ .ಮಂಗಳೂರಿನ ತನ್ನ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ಸಮ ವಸ್ತ್ರದಲ್ಲಿದ್ದ ಪೊಲೀಸ್ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿ ಮೂಲಕ ಸಂಸದ ನಳಿನ್ ಕುಮಾರ್ ಕಟೀಲ್ ದುರ್ವರ್ತನೆ ತೋರಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು .

    ಈ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಪ್ರಕರಣ ದಾಖಲಿಸಲಾಗಿದೆ. ಪೋಲಿಸರು ಎಫ್ ಐಆರ್ ಕೂಡ ದಾಖಲಿಸಿದ್ದಾರೆ. ಕೂಲಂಕುಷ ತನಿಖೆ ನಡೆಯಬೇಕು ಎಂದು ಅವರು ಒತ್ತಾಯಿಸಿದರು.ಈ ರೀತಿಯ ದುವರ್ತನೆ ತೋರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕಾದ ಅವಶ್ಯಕತೆ ಇದೆ ಎಂದರು.
    ಮಂಗಳೂರಿನಲ್ಲಿ ಬಿಜೆಪಿ ಯುವ ಮೋರ್ಚಾ ಹಮ್ಮಿಕೊಂಡಿದ್ದ ಮಂಗಳೂರು ಚಲೋ ಒಂದು ಫ್ಲಾಪ್ ಶೋ ಎಂದು ವ್ಯಂಗ್ಯವಾಡಿದರು. ಬಿಜೆಪಿ ನಾಯಕರು ಕಾರ್ಯಕ್ರಮಕ್ಕೂ ಮೊದಲು ಲಕ್ಷ ಜನರನ್ನು ಸೇರಿಸುತ್ತೇವೆ ಎಂದರು. ನಂತರ 5 ಸಾವಿರ ಜನರನ್ನು ಸೇರಿಸಲು ಬಿಜೆಪಿ ನಾಯಕರು ಪರದಾಡಿದರು. ಮಂಗಳೂರು ಚಲೋ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕೆ ಬಿಜೆಪಿ ನಾಯಕರಲ್ಲೇ ಭಿನ್ನಮತ ಇತ್ತು ಎಂದು ವ್ಯಂಗ್ಯವಾಡಿದರು.
    ಬಿಜೆಪಿ ಪ್ಲಾಪ್ ಶೋ ಗಳ ಬೆಳವಣಿಗೆಯ ಬಳಿಕ ಕರಾವಳಿ ಭಾಗದಲ್ಲಿ ಕಾಂಗ್ರೆಸ್ ಮತ್ತಷ್ಟು ಶಕ್ತಿಶಾಲಿಯಾಗಿದೆ. ಮುಂಬರುವ ಚುನಾವಣೆಯಲ್ಲಿ ಕರಾವಳಿಯ ಎಲ್ಲ ಸ್ಥಾನಗಳನ್ನು ಇನ್ನೂ ಹೆಚ್ಚಿನ ಮತಗಳ ಅಂತರದಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

    Share Information
    Advertisement
    Click to comment

    Leave a Reply

    Your email address will not be published. Required fields are marked *