DAKSHINA KANNADA
‘ಬೀದಿಬದಿ ವ್ಯಾಪಾರಿಗಳ ಮಕ್ಕಳೂ ಉನ್ನತ ವಿದ್ಯಾಭ್ಯಾಸ ಪಡೆದು ಸಮಾಜದ ಉನ್ನತ ಸ್ಥಾನಮಾನ ಅಲಂಕರಿಸುವಂತಾಗಬೇಕು’
ಮಂಗಳೂರು: ಬೀದಿಬದಿ ವ್ಯಾಪಾರಿಗಳ ಮಕ್ಕಳೂ ಉನ್ನತ ವಿದ್ಯಾಭ್ಯಾಸ ಪಡೆದು ಸಮಾಜದ ಉನ್ನತ ಸ್ಥಾನಮಾನ ಅಲಂಕರಿಸುವಂತಾಗಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘದ ಗೌರವಾಧ್ಯಕ್ಷರೂ, ಡಿವೈಎಫ್ಐ ಜಿಲ್ಲಾಧ್ಯಕ್ಷರಾದ ಬಿ ಕೆ ಇಮ್ತಿಯಾಜ್ ಹೇಳಿದರು.
ಅವರು ಇಂದು ನಗರದ ಬೀದಿಬದಿ ವ್ಯಾಪಾರಸ್ಥರ ಕಚೇರಿಯಲ್ಲಿ ಬೀದಿ ವ್ಯಾಪಾರಿಗಳ ಮಕ್ಕಳಿಗೆ ವಿದ್ಯಾರ್ಥಿ ವೇತನ ವಿತರಿಸಿ ಮಾತನಾಡುತ್ತಿದ್ದರು.
ಬೀದಿ ವ್ಯಾಪಾರಿಗಳದ್ದು ಸಂಘರ್ಷದ, ಆತಂಕದ ಬದುಕು ಬಡ ಬೀದಿ ವ್ಯಾಪಾರಿಗಳಿಗೆ ಲಕ್ಷಾಂತರ ಕಾಲೇಜ್ ಶುಲ್ಕ ಕಟ್ಟಲು ಡೊನೇಷನ್ ಕೊಡಲು ಸಾಧ್ಯ ಇಲ್ಲದ ಈ ಕಾಲದಲ್ಲಿ ಬೀದಿವ್ಯಾಪಾರಿಗಳ ಮಕ್ಕಳ ಭವಿಷ್ಯಕ್ಕಾಗಿ ಸರಕಾರ ಶೈಕ್ಷಣಿಕ ಯೋಜನೆಯನ್ನು ರೂಪಿಸಬೇಕು ಎಂದು ಸರಕಾರವನ್ನು ಆಗ್ರಹಿಸಿದರು.
ಸಂಘದ ಅಧ್ಯಕ್ಷರಾದ ಮಹಮ್ಮದ್ ಮುಸ್ತಫಾ ಅಧ್ಯಕ್ಷತೆ ವಹಿಸಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಸಂಘದ ಪ್ರಮುಖರಾದ ಶ್ರೀಧರ ಭಂಡಾರಿ , ಆದಂ ಬಜಾಲ್, ಹಸನ್ ಕುದ್ರೋಳಿ, ಗೋಪಾಲ್ ಕಂಕನಾಡಿ, ಗಜಾನಂದ ಕುಂಬ್ಳೆ, ಇಸ್ಮಾಯಿಲ್ ಉಳ್ಳಾಲ್,ಅಬ್ದುಲ್ ರಹಿಮಾನ್, ಮೇರಿ ಡಿಸೋಜಾ, ಮೇಬಲ್ ಡಿಸೋಜ,ರಿಯಾಝ್ ಎಲ್ಯಾರ್ ಪದವು, ಕಾಜ ಮೊಹಿಯುದ್ದೀನ್ ಬೆಂಗ್ರೆ , ಶೇಖರ್ ದೇವಾಡಿಗ ಉಪಸ್ಥಿತರಿದ್ದರು.
ಸಂಘದ ಉಪಾಧ್ಯಕ್ಷರಾದ ಸಿ.ಎಸ್ ಶಂಕರ್ ಸ್ವಾಗತಿಸಿ ವಂದಿಸಿದರು.
ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ 60% ಮೇಲ್ಪಟ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, 80% ಮೇಲ್ಪಟ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನದ ಜೊತೆಯಲ್ಲಿ ಪ್ರತಿಭಾ ಪುರಸ್ಕಾರ ಮಾಡಿ ಗೌರವಿಸಲಾಯಿತು.