KARNATAKA
ಮಂಗಳೂರು ಗಲಭೆ ಪೂರ್ವ ನಿಯೋಜಿತ – ಸಿಎಂ ಯಡಿಯೂರಪ್ಪ
ಮಂಗಳೂರು ಗಲಭೆ ಪೂರ್ವ ನಿಯೋಜಿತ – ಸಿಎಂ ಯಡಿಯೂರಪ್ಪ
ಮಂಗಳೂರು ಡಿಸೆಂಬರ್ 25: ಮಂಗಳೂರಿನಲ್ಲಿ ನಡೆದ ಹಿಂಸಾಚಾರದ ವಾಸ್ತವ ಸ್ಥಿತಿ ಯನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಗಲಭೆ ಪೂರ್ವ ನಿಯೋಜಿತವಾಗಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.
ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ಮಾತನಾಡಿದ ಅವರು ಗಲಭೆಗೆ ಕಲ್ಲು ಶೇಖರಣೆ ಮಾಡಿದರ ಬಗ್ಗೆ ವಿಡಿಯೋ ದಾಖಲೆ ಇದ್ದು, ಇದು ವ್ಯವಸ್ಥಿತ ಷಡ್ಯಂತ್ರವಾಗಿದೆ ಎಂದ ಅವರು ಟ್ರಕ್ಕ್ ನಲ್ಲಿ ಕಲ್ಲು ತಂದು ತೂರಾಟ ಮಾಡಿದ್ದಾರೆ. ಕಲ್ಲು ತೂರಾಟ ಮಾಡಿದವರನ್ನು ಬಿಡಲ್ಲ ಎಂದು ಎಚ್ಚರಿಸಿದರು. ಬಂಧಿತ ಆರೋಪಿಗಳ ಹಿನ್ನಲೆ ಉದ್ದೇಶದ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದು ಎಂದರು.
ಮಂಗಳೂರಿನಲ್ಲಿ ಸಿಎಂ ಯಡಿಯೂರಪ್ಪ ವಾಸ್ತವ್ಯ ಹಿನ್ನಲೆ, ಮಂಗಳೂರಿನ ಸರ್ಕ್ಯೂಟ್ ಹೌಸ್ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಇಂದು ಬೆಳಿಗ್ಗೆ ಮುಖ್ಯಮಂತ್ರಿಗಳು ಸರ್ಕ್ಯೂಟ್ ಹೌಸ್ ನಲ್ಲಿ ವಾಕಿಂಗ್ ಮಾಡಿದ್ದು, ಸಂಸದೆ ಶೋಭಾ ಕರಂದ್ಲಾಜೆ,ಸಚಿವ ಕೋಟ ಶ್ರೀನಿವಾಸ ಪೂಜಾರಿ,ಶಾಸಕ ಹರೀಶ್ ಪೂಂಜಾ ಸಿಎಂ ಗೆ ಸಾಥ್ ನೀಡಿದ್ದರು. ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆ ಬೆದರಿಕೆ ಹಿನ್ನಲೆ ಖಾಕಿ ಸರ್ಪಗಾವಲು ಹಾಕಲಾಗಿದ್ದು, ಸ್ಥಳೀಯ ಬಿಜೆಪಿ ನಾಯಕರನ್ನು ಸಿಎಂ ಭೇಟಿಗೆ ನಿರಾಕರಿಸಲಾಗುತ್ತಿದೆ.
ಮಂಗಳೂರಿನ ಸರ್ಕ್ಯೂಟ್ ಹೌಸ್ ಸಿಎಂ ಯಡಿಯೂರಪ್ಪ ಮಹತ್ವದ ಸಭೆ ನಡೆಸುತ್ತಿದ್ದು, ಗೃಹಸಚಿವ ಬಸವರಾಜ ಬೊಮ್ಮಾಯಿ ಸರ್ಕ್ಯೂಟ್ ಹೌಸ್ ಗೆ ಆಗಮಿಸಿದ್ದಾರೆ. ಪೊಲೀಸ್ ಕಮೀಷನರ್ ಡಾ.ಪಿ ಎಸ್ ಹರ್ಷ ಸೇರಿದಂತೆ ಪೊಲೀಸ್ ಅಧಿಕಾರಿಗಳ ಆಗಮಿಸಿದ್ದು, ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಯಡಿಯೂರಪ್ಪ ಸಭೆ ನಡೆಸಲಿದ್ದಾರೆ.