DAKSHINA KANNADA
ಮಂಗಳೂರು: ಕಾಂಗ್ರೆಸ್ ನಾಯಕಿ, ಸಿದ್ದರಾಮಯ್ಯ ಆಪ್ತೆ ಕವಿತಾ ಸನಿಲ್ ಬಿಜೆಪಿ ಸೇರ್ಪಡೆ..!

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್, ಕಾಂಗ್ರೆಸ್ ನಾಯಕಿ ಕವಿತಾ ಸನಿಲ್ ಶನಿವಾರ ಬಂಟ್ವಾಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು.
ಬಿಜೆಪಿ ಸೇರ್ಪಡೆ ಬಳಿಕ ಮಾತನಾಡಿದ ಕವಿತಾ ಸನಿಲ್, ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ನಾನು ಪಕ್ಷ ಸೇರ್ಪಡೆಯಾಗಿದ್ದೇನೆ ಎಂದರು. ಸಮಾವೇಶದಲ್ಲಿ ಮಾತನಾಡಿದ ಕವಿತಾ ಸನಿಲ್, ನನ್ನ ರಾಜಕೀಯ ಗುರು ಜನಾರ್ದನ ಪೂಜಾರಿ ಆಶೀರ್ವಾದ ಪಡೆದು ಇಲ್ಲಿ ಬಂದಿದ್ದೇನೆ. ಒಳ್ಳೆಯದಾಗೋದಿದ್ದರೆ ಹೋಗು ಅಂತ ಆಶೀರ್ವಾದ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಆಡಳಿತ ಇದೆ, ಏನೋ ಆಸೆ ಇಟ್ಟುಕೊಂಡು ಬಿಜೆಪಿ ಸೇರಿದ್ದೇನೆ ಅಂತ ಅಂದ್ಕೊಳ್ಳಬೇಡಿ. ಬಿಜೆಪಿಗೆ ಅಧಿಕಾರ ಇಲ್ಲ. ಪ್ರಧಾನಿ ಮೋದಿಯವರ ಆಡಳಿತ ನೋಡಿ ಬಿಜೆಪಿ ಸೇರುತ್ತಿದ್ದೇನೆ. ರಾಜ್ಯದಲ್ಲಿ ಏನಾಗುತ್ತಿದೆ ಅಂತ ನೋಡುತ್ತಿದ್ದೇವೆ. ಸಿಎಂ ಸಿದ್ದರಾಮಯ್ಯ ಆಪ್ತರಾಗಿದ್ದ ಬಿಲ್ಲವ ಸಮುದಾಯಕ್ಕೆ ಸೇರಿದ ಕವಿತಾ ಸನಿಲ್ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ್ರೂ ತನಗೆ ಸೂಕ್ತ ಸ್ಥಾನಮಾನ ನೀಡಿಲ್ಲ ಎಂದು ಪಕ್ಷ ಚಟುವಟಿಕೆಯಿಂದ ದೂರ ಉಳಿದಿದ್ದರು. ಯಾವುದಾದರು ಒಂದು ನಿಗಮ ಸಿಗಬಹುದು ಎಂಬ ಅವರ ನಿರೀಕ್ಷೆ ಹುಸಿಯಾದ ಹಿನ್ನಲೆಯಲ್ಲಿ ಇದೀಗ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
