LATEST NEWS
ಸೈಬರ್ ವಂಚಕರ ಬೆನ್ನ ಹಿಂದೆ ಬಿದ್ದ ಮಂಗಳೂರು ಸೆನ್ ಪೊಲೀಸರು – ವಂಚಕರಿಗೆ 500ಕ್ಕೂ ಹೆಚ್ಚು ಸಿಮ್ ಪೂರೈಸಿದ್ದ ಆರೋಪಿ ಬಂಧನ
ಮಂಗಳೂರು ಡಿಸೆಂಬರ್ 23: ಮಂಗಳೂರು ಪೊಲೀಸರು ಸೈಬರ್ ವಂಚಕರ ಬೆನ್ನು ಹಿಂದೆ ಬಿದ್ದಿದ್ದಾರೆ. ಈಗಾಗಲೇ ಕೆಲವು ಸೈಬರ್ ವಂಚಕರನ್ನು ಅರೆಸ್ಟ್ ಮಾಡಿ ಜೈಲು ಕಂಬಿ ಎಣಿಸುವಂತೆ ಮಾಡಿರುವ ಮಂಗಳೂರು ಪೊಲೀಸರು ಇದೀಗ ದೇಶದಿಂದ ವಿದೇಶಕ್ಕೆ 500ಕ್ಕೂ ಅಧಿಕ ಹೆಚ್ಚು ಸಿಮ್ ಗಳನ್ನು ಪೂರೈಕೆ ಮಾಡಿದ ಆರೋಪಿಯನ್ನುದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಬಂಧಿತರನ್ನು ಕಣಾತಲ ವಾಸುದೇವ ರೆಡ್ಡಿ (25) ಎಂದು ಗುರುತಿಸಲಾಗಿದೆ.
ಆರೋಪಿ ಕಣಾತಲ ವಾಸುದೇವ ರೆಡ್ಡಿ ಓಡಿಶಾ ಮೂಲದವನು. ಸೈಬರ್ ವಂಚನೆ ಪ್ರಕರಣದ ತನಿಖೆ ನಡೆಸುತ್ತಿದ್ದ ವೇಳೆ ಆರೋಪಿ ಕಣಾತಲ ವಾಸುದೇವ ರೆಡ್ಡಿ ಸಿಮ್ ಪೂರೈಕೆ ಮಾಹಿತಿ ಮಂಗಳೂರಿನ ಸೆನ್ ಪೊಲೀಸರಿಗೆ ಗೊತ್ತಾಗಿದೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿ ಕಣಾತಲ ವಾಸುದೇವ ರೆಡ್ಡಿಯ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.
ವಂಚಕ ನಡವೂಲು ವೀರವೆಂಕಟ ಸತ್ಯನಾರಾಯಣ ರಾಜು ಎಂಬುವನು ಹಣ ವಿನಿಯೋಗಿಸಲು ವಾಟ್ಸಾಪ್ ಮೂಲಕ ನಕಲಿ ಲಿಂಕ್ ಕಳುಹಿಸಿ ಅದರ ಮೂಲಕ ಲಕ್ಷಾಂತರ ರೂ. ದೋಚಿದ್ದನು. ಹೀಗೆ, ಹಂತ ಹಂತವಾಗಿ 10,84,017 ರೂಪಾಯಿ ಪಡೆದು ವಂಚನೆ ಎಸಗಿದ್ದಾನೆ. ಪ್ರಕರಣ ಸಂಬಂಧ ಪೊಲೀಸರು ಈಗಾಗಲೇ ಸೈಬರ್ ವಂಚಕ ನಡವೂಲು ವೀರವೆಂಕಟ ಸತ್ಯನಾರಾಯಣ ರಾಜುನನ್ನು ಬಂಧಿಸಿದ್ದಾರೆ.
ಆರೋಪಿ ನಡವೂಲು ವೀರವೆಂಕಟ ಸತ್ಯನಾರಾಯಣ ರಾಜುನನ್ನು ವಿಚಾರಣೆಗೆ ಒಳಪಡಿಸಿದಾಗ ಸಿಮ್ ಮಾರಾಟ ದಂಧೆಯ ಬಗ್ಗೆ ಬಾಯಿ ಬಿಟ್ಟಿದ್ದಾನೆ. ಕೂಡಲೇ ಪೊಲೀಸರು ಕಣಾತಲ ವಿರುದ್ಧ ಲುಕ್ಔಟ್ ನೋಟಿಸ್ ಹೊರಡಿಸಿದ್ದರು. ಆರೋಪಿ ಕಣಾತಲ ದುಬೈಗೆ ತೆರಳು ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ, ಇಲ್ಲಿನ ಇಮಿಗ್ರೇಶನ್ ಅಧಿಕಾರಿಗಳು ಆರೋಪಿಯನ್ನು ವಶಕ್ಕೆ ಪಡೆದರು. ಇನ್ನುಳಿದ ಆರೋಪಿಗಳ ಪತ್ತೆಗೆ ಮಂಗಳೂರು ಪೊಲೀಸರಿಂದ ತನಿಖೆ ಮುಂದುವರೆದಿದೆ.