ಮಂಗಳೂರು, ಜುಲೈ 21: ಮಂಗಳೂರಿನ ಮೂವರು ಭಜರಂಗದಳ ಕಾರ್ಯಕರ್ತರಿಗೆ ಗಡೀಪಾರು ನೋಟೀಸ್ ನೀಡಿದ್ದು, ಇಂದು ಕಾನೂನು ಸುವ್ಯವಸ್ಥೆ ಡಿಸಿಪಿ ಎದುರು ಹಾಜರಾಗಲು ಸೂಚನೆ ನೀಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಿಂದ ಮೂವರು ಹಿಂದೂ ಕಾರ್ಯಕರ್ತರಿಗೆ ಗಡೀಪಾರಿಗೆ ಸಿದ್ದತೆ ನಡೆದಿದ್ದು, ಅಧಿಕೃತವಾಗಿ ಒಂದು ವರ್ಷಗಳ ಕಾಲ ಗಡೀಪಾರು ಆದೇಶ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಇತ್ತೀಚೆಗೆ ನಡೆದ ಎರಡು ನೈತಿಕ ಪೊಲೀಸ್ ಗಿರಿ ಕೇಸ್ ನಲ್ಲಿ ಮೂವರು ಭಾಗಿಯಾಗಿದ್ದು, ಸುಲ್ತಾನ್ ಜ್ಯುವೆಲ್ಲರಿ ಹಾಗೂ ಮರೋಳಿ ಹೋಳಿ ಆಚರಣೆ ವೇಳೆ ನೈತಿಕ ಪೊಲೀಸ್ ಗಿರಿ ನಡೆಸಿದ ವಿಚಾರವಾಗಿ ಸ್ಥಳೀಯ ಠಾಣೆಗಳ ಇನ್ಸ್‌ಪೆಕ್ಟರ್ ಗಳಿಂದ ಗಡೀಪಾರಿಗೆ ವರದಿ ನೀಡಿರುವುದರಿಂದ ಅಧಿಕೃತವಾಗಿ ಕಾನೂನು ಪ್ರಕಾರ ಗಡೀಪಾರು ಅಸ್ತ್ರ ಪ್ರಯೋಗ ಮಾಡಲಾಗಿದೆ. ಇದೀಗ ನೋಟೀಸ್ ನೀಡಿ ಗಡೀಪಾರು ಪ್ರಕ್ರಿಯೆಗೆ ಚಾಲನೆ ನೀಡಿದ್ದಾರೆ.