LATEST NEWS
ಮಂಗಳೂರು : ಆ 10 ರಂದು ಮೇಜರ್ ಜನರಲ್ ಸತೀಶ್ ಭಂಡಾರಿ ಅವರಿಗೆ ‘ಎಮಿನೆಂಟ್ ಬಂಟ್ ಪರ್ಸನಾಲಿಟಿ ಅವಾರ್ಡ್’ ಪ್ರದಾನ
ಮಂಗಳೂರು: ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್‌ನ 28ನೇ ವಾರ್ಷಿಕ ಮಹಾಸಭೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಆ.10ರಂದು ನಗರದ ಮೋತಿ ಮಹಲ್ ಹೋಟೆಲ್‌ನಲ್ಲಿ ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್ ಅಧ್ಯಕ್ಷ ಡಾ.ಎ.ಜೆ.ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಇದೇ ಸಂದರ್ಭ ಮೇಜರ್ ಜನರಲ್ ಸತೀಶ್ ಭಂಡಾರಿ (Major General Satish Bhandari) ಅವರಿಗೆ ‘ಎಮಿನೆಂಟ್ ಬಂಟ್ ಪರ್ಸನಾಲಿಟಿ ಅವಾರ್ಡ್’ ಪ್ರದಾನ ಮಾಡಲಾಗುವುದು. ಮಂಗಳೂರು ವಿ.ವಿ.ಯಿಂದ ಗೌರವ ಡಾಕ್ಟರೇಟ್ ಪುರಸ್ಕೃತರಾದ ಡಾ.ಕೆ. ಪ್ರಕಾಶ್ ಶೆಟ್ಟಿ ಅವರನ್ನು ಸನ್ಮಾನಿಸಲಾಗುವುದು. ಹಿರಿಯ ಯಕ್ಷಗಾನ ಕಲಾವಿದ ಹಳ್ಳಾಡಿ ಜಯರಾಮ ಶೆಟ್ಟಿ ಅವರಿಗೆ ದಿ.ಡಾ.ಡಿ.ಕೆ.ಚೌಟ ದತ್ತಿನಿಧಿ ಪ್ರಶಸ್ತಿ, ಕೃಷಿ ಕ್ಷೇತ್ರದ ಸಾಧನೆಗಾಗಿ ಪುಷ್ಪಶೆಟ್ಟಿ ಅವರಿಗೆ ದಿ.ಎಣ್ಮಕಜೆ ಕಲಾವತಿ ಶೆಟ್ಟಿ ದತ್ತಿನಿಧಿ ಪ್ರಶಸ್ತಿ , ಸಿಎ ಮನೀಶ್ ಶೆಟ್ಟಿ ಅವರಿಗೆ ಸಿಎ ವೈ.ಆರ್.ಶೆಟ್ಟಿ ದತ್ತಿನಿಧಿ ಪ್ರಶಸ್ತಿ , ಸಿಎ ರೋಶನ್ ಶೆಟ್ಟಿ ಅವರಿಗೆ ಸಿಎ ಗೋಪಾಲ್.ಬಿ.ಶೆಟ್ಟಿ ದತ್ತಿನಿಧಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ವಿಶ್ವ ಬಂಟ ಪ್ರತಿಷ್ಠಾನದ ಕಾರ್ಯದರ್ಶಿ ಸಿಎ ಸುಧೀರ್ ಕುಮಾರ್ ಶೆಟ್ಟಿ ಪ್ರಕಟನೆ ಯಲ್ಲಿ ತಿಳಿಸಿದ್ದಾರೆ.
You must be logged in to post a comment Login