Connect with us

    LATEST NEWS

    ಮಂಗಳೂರು ಮಹಾನಗರಪಾಲಿಕೆ ಮಾಜಿ ಮೇಯರ್ ರಜನಿ ದುಗ್ಗಣ್ಣ ನಿಧನ

    ಮಂಗಳೂರು ಜುಲೈ 09 : ಮಂಗಳೂರು ಮಹಾನಗರಪಾಲಿಕೆಯ ಮಾಜಿ ಮೇಯರ್ ಬಿಜೆಪಿ ನಾಯಕಿ ರಜನಿ ದುಗ್ಗಣ್ಣ ಇಂದು ನಿಧನರಾಗಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು, ರಜನಿ ದುಗ್ಗಣ್ಣ ಅನಾರೋಗ್ಯದಿಂದ ಬಳಲುತ್ತಿದ್ದು, ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.


    30 ವರ್ಷಗಳ ಕಾಲ ಅವರು ಮಂಗಳೂರು ನಗರ ಪಾಲಿಕೆ ಸದಸ್ಯರಾಗಿದ್ದರು. ಮೊದಲಿಗೆ ಉಪಮೇಯರ್ ಆಗಿದ್ದು ಬಳಿಕ ಮೇಯರ್ ಆಗಿದ್ದರು. ಮಂಗಳೂರು ಮಹಾನಗರ ಪಾಲಿಕೆಗೆ 2010-11ರ ಅವಧಿಯಲ್ಲಿ ಮೇಯರ್‌ ಆಗಿದ್ದ ಇವರು ಸಾಕಷ್ಟು ಅಭಿವೃದ್ಧಿ ಕೆಲಸ ಕಾರ್ಯಗಳಲ್ಲಿ ತೊಡಗಿಸಿದ್ದರು.

    ಹೊಸಬೆಟ್ಟು ವಾರ್ಡ್‌ ನಂಬರ್ 8ರ ಪ್ರತಿನಿಧಿಯಾಗಿದ್ದ ರಜನಿ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಸದಸ್ಯರಾಗಿದ್ದರು. ಅವರು ಒಂದು ಗಂಡು, ಮೂರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply