Connect with us

    LATEST NEWS

    ಬಂದರು ಪ್ರದೇಶದ ಮನೆಯೊಂದರಲ್ಲಿ ಬೆಂಕಿ ಆಕಸ್ಮಿಕ

    ಮಂಗಳೂರು ಎಪ್ರಿಲ್ 06: ಬಂದರಿನ ಜಿಎಂ ರಸ್ತೆಯಲ್ಲಿರುವ ಹೆಂಚಿನ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ನಡೆದಿದೆ. ಮನೆಯಲ್ಲಿದ್ದ ಸೊತ್ತುಗಳು ಬೆಂಕಿಗಾಹುತಿಯಾಗಿದೆ.

    ಇಂದು ಬೆಳಿಗ್ಗೆ ಸರಿಸುಮಾರು 11 ಘಂಟೆಗೆ ಬಂದರ್ ನ ಸಂಶುದ್ದೀನ್ ಎಂಬವರ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು.  ಮನೆಯಲ್ಲಿ ಒಟ್ಟು ನಾಲ್ಕು ಕುಟುಂಬ ವಾಸವಾಗಿದ್ದು, ಬೆಂಕಿ ಕಾಣಿಸಿಕೊಂಡ ಕೂಡಲೇ ಮನೆಯವರು ಹೊರಗೆ ಓಡಿ ಬಂದ ಕಾರಣ ಸುರಕ್ಷಿತರಾಗಿದ್ದಾರೆ. ಪಾಂಡೇಶ್ವರ ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿದೆ ಉಂಟಾಗಿರುವ ಸಾಧ್ಯತೆ ಇದೆ ಎಂದು ಅಗ್ನಿ ಶಾಮಕ ದಳದವರು ಅಭಿಪ್ರಾಯಪಟ್ಟಿದ್ದಾರೆ. ಸುಮಾರು 10 ಲಕ್ಷದವರೆಗೆ ನಷ್ಟ ಸಂಭವಿಸಿದೆ ಎಂದು ಹೇಳಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply