LATEST NEWS
ಮಂಗಳೂರು – ವಿಷಾಹಾರ ಸೇವನೆ 100ಕ್ಕೂ ಅಧಿಕ ವಿಧ್ಯಾರ್ಥಿನಿಯರು ಅಸ್ವಸ್ಥ

ಮಂಗಳೂರು ಫೆಬ್ರವರಿ 06: ಮಂಗಳೂರಿನ ಶಕ್ತಿನಗರದಲ್ಲಿರುವ ಖಾಸಗಿ ಆಸ್ಪತ್ರೆಯ ಸಿಟಿ ನರ್ಸಿಂಗ್ ವಿದ್ಯಾರ್ಥಿನಿಯರ ಹಾಸ್ಟೆಲ್ ನಲ್ಲಿ ವಿಷಾಹಾರ ಸೇವನೆಯಿಂದ 100 ಕ್ಕೂ ಅಧಿಕ ವಿದ್ಯಾರ್ಥಿನಿಯರು ತೀವ್ರ ಅಸ್ವಸ್ಥಗೊಂಡಿದ್ದು, ಕೆಎಂಸಿ, ಸಿಟಿ ಆಸ್ಪತ್ರೆ ಸೇರಿ ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.
ವಿಷಾಹಾರ ಸೇವನೆಯ ವಿದ್ಯಾರ್ಥಿನಿಯರನ್ನು ದಾಖಲು ಮಾಡಿದ ಸಿಟಿ ಆಸ್ಪತ್ರೆ ಬಳಿ ಭಾರಿ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದು ಮಂಗಳೂರು ಪೊಲೀಸ್ ಕಮಿಷನರ್ ಎನ್ ಶಶಿ ಕುಮಾರ್, ಡಿಸಿಪಿಗಳು ಮತ್ತಿತರ ಹಿರಿಯ ಅಧಿಕಾರಿಗಳು ಸ್ಥಳದಲ್ಲಿದ್ದು ವಿಚಾರಣೆ ಮಾಡುತ್ತಿದ್ದಾರೆ. ವಿಷಾಹಾರ ಸೇವನೆಯ ಕಾರಣ ಇನ್ನು ಕೂಡ ಸ್ಪಷ್ಟವಾಗಿಲ್ಲ ಈ ಬಗ್ಗೆ ಪೊಲೀಸರು ವಿವಿಧ ತಜ್ಞರೊಂದಿಗೆ ತನಿಖೆ ಆರಂಭಿಸಿದ್ದಾರೆ.

ವಿಷಾಹಾರ ಸೇವನೆಯಿಂದ ಅಸ್ವಸ್ಥಗೊಂಡು ಎ.ಜೆ ಆಸ್ಪತ್ರೆ ದಾಖಲಾಗಿರುವ ಸಿಟಿ ನರ್ಸಿಂಗ್ ಕಾಲೇಜು ವಿಧ್ಯಾರ್ಥಿಗಳ ಆರೋಗ್ಯ ವಿಚಾರಿಸಲು ಶಾಸಕ ವೇದವ್ಯಾಸ್ ಕಾಮತ್ ಅವರು ಆಸ್ಪತ್ರೆಗೆ ಭೇಟಿ ನೀಡಿದರು. ಆರೋಗ್ಯ ಅಧಿಕಾರಿಗಳಿಂದ ಮಾಹಿತಿ ಪಡೆದು ತಕ್ಷಣ ಕ್ರಮ ಕೈಗೊಳ್ಳುವಂತೆ ಶಾಸಕ ಕಾಮತ್ ಸೂಚನೆ ನೀಡಿದ್ದಾರೆ.