LATEST NEWS
ಮಂಜನಾಡಿ – ಗ್ಯಾಸ್ ಸಿಲಿಂಡರ್ ಸ್ಪೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿ ಸಾವು
ಮಂಗಳೂರು ಡಿಸೆಂಬರ್ 27: ಡಿಸೆಂಬರ್ 8 ರಂದು ಗ್ಯಾಸ್ ಸಿಲಿಂಡರ್ ಸ್ಪೋಟದಿಂದಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಇದೀಗ ಮತ್ತೊಬ್ಬರು ಸಾವವಪ್ಪಿದ್ದಾರೆ. ಇದರಿಂದಾಗಿ ಘಟನೆಯಲ್ಲಿ ಮೃತರ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ.
ಸ್ಫೋಟದಿಂದ ಗಂಭೀರ ಗಾಯಗೊಂಡಿದ್ದ ಝುಲೈಕ ಮೆಅದಿಯಾ(15) ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಸಾವನ್ನಪ್ಪಿದ್ದಾಳೆ. ಝುಲೈಕ ಮೊಂಟೆಪದವು ಸರ್ಕಾರಿ ಶಾಲೆಯಲ್ಲಿ ಒಂಬತ್ತನೇ ತರಗತಿಯ ವಿದ್ಯಾರ್ಥಿನಿಯಾಗಿದ್ದಳು. ಡಿಸೆಂಬರ್ 8 ರಂದು ಮಂಜನಾಡಿ ಗ್ರಾಮದ ಖಂಡಿಕ ನಿವಾಸಿ ಮುತ್ತಲಿಬ್ ಅವರ ಮನೆಯಲ್ಲಿ ತಡರಾತ್ರಿ ಗ್ಯಾಸ್ ಸಿಲಿಂಡರ್ ಸ್ಪೋಟ ಸಂಭವಿಸಿತ್ತು.
ಘಟನೆಯಲ್ಲಿ ಕೊಠಡಿಯಲ್ಲಿ ಮಲಗಿದ್ದ ಮುತ್ತಲಿಬ್ ಅವರ ಪತ್ನಿ ಖುಬ್ರಾ, ಮಕ್ಕಳಾದ ಝುಲೈಕ ಮೆಅದಿಯಾ, ಮಾಝಿಯಾ ಮತ್ತು ಮಾಯಿದಾ ಸುಟ್ಟು ಗಂಭೀರ ಗಾಯಗೊಂಡಿದ್ದು ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮುತ್ತಲಿಬ್ ಅವರ ಪತ್ನಿ ಖುಬ್ರಾ ಅವರು ಚಿಕಿತ್ಸೆ ಫಲಕಾರಿಯಾಗದೆ ಡಿ.13ರಂದು ಮೃತಪಟ್ಟಿದ್ದರು. ಇಂದು ಆಕೆಯ ಹಿರಿಯ ಮಗಳು ಝುಲೇಕ ಮೆಅದಿಯ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಇನ್ನಿಬ್ಬರು ಮಕ್ಕಳಿಗೆ ಚಿಕಿತ್ಸೆ ಮುಂದುವರಿಸಲಾಗಿದೆ.