LATEST NEWS
ಮಂಗಳೂರು ವಿಮಾನ ನಿಲ್ದಾಣದಲ್ಲಿ 1.46 ಕೋಟಿ ಮೌಲ್ಯದ ಚಿನ್ನ ವಶ

ಮಂಗಳೂರು ನವೆಂಬರ್ 2: ದುಬೈನಿಂದ ಅಕ್ರಮವಾಗಿ ಸಾಗಾಟಕ್ಕೆ ಯತ್ನಿಸಿದ ಚಿನ್ನವನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅಕ್ಟೋಬರ್ ತಿಂಗಳಲ್ಲಿ 10 ದಿನಗಳ ಅವಧಿಯಲ್ಲಿ ಸುಮಾರು 1 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಚಿನ್ನ ಸಾಗಾಟ ನಡೆದಿದೆ.
ಅಕ್ಟೋಬರ್ 22ರಿಂದ ಅಕ್ಟೋಬರ್ 31ರ ಅವಧಿಯಲ್ಲಿ ಅಕ್ರಮವಾಗಿ ಸಾಗಾಟ ಮಾಡಿದ 24 ಕ್ಯಾರೆಟ್ ಪರಿಶುದ್ಧತೆಯ 1,46,87,410 ರೂ. ಮೌಲ್ಯದ 2,870 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡಿದ್ದಾರೆ
ಚಿನ್ನವನ್ನು ಆರು ಮಂದಿ ಪ್ರಯಾಣಿಕರು ಪೇಸ್ಟ್, ಪೌಡರ್ ರೂಪಕ್ಕೆ ಪರಿವರ್ತಿಸಿ ಬನಿಯನ್, ಜೀನ್ಸ್ ಪ್ಯಾಂಟ್, ಶೂಗಳು ಮತ್ತು ಗುದದ್ವಾರದಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದರು ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
