LATEST NEWS
ಉಂಡ ಮನೆಗೆ ಕನ್ನ ಬಗೆದ ನೌಕರರು…ಕೋಟಿ ಮೌಲ್ಯದ ಕಚ್ಚಾ ವಸ್ತುಗಳ ಗೋಲ್ ಮಾಲ್…!!
ಮಂಗಳೂರು ಅಕ್ಟೋಬರ್ 14: ತಾವು ಕೆಲಸ ನಿರ್ವಹಿಸುತ್ತಿದ್ದ ಕಂಪೆನಿಯ ಕೋಟ್ಯಾಂತರ ಮೌಲ್ಯದ ಕಚ್ಚಾ ಸಾಮಾಗ್ರಿಗಳನ್ನು ಕಳವು ಮಾಡಿ ಕಂಪೆನಿ ಮೋಸ ಮಾಡಿದ ನಾಲ್ವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮಹೇಶ್ ಕುಲಾಲ್, ಅನಂತ ಸಾಗರ, ಸಾಯಿ ಪ್ರಸಾದ್, ಕಿರಣ್ ಸಮಾನಿ ಎಂದು ಗುರುತಿಸಲಾಗಿದೆ.
ಮಂಗಳೂರಿನ ಬೈಕಂಪಾಡಿಯ ಬ್ರೈಟ್ ಪ್ಯಾಕೆಜಿಂಗ್ ಪ್ರೈ.ಲಿ. ಎಂಬ ಕಂಪೆನಿಯಲ್ಲಿ ಪ್ಲ್ಯಾಸ್ಟಿಕ್ ಸಂಬಂಧಿತ ಉತ್ಪನ್ನಗಳನ್ನು ತಯಾರಿಸುತ್ತಿದ್ದು, ಇದಕ್ಕೆ ಬೇಕಾದ ಕಚ್ಚಾ ಉತ್ಪನ್ನಗಳನ್ನು ಗುಜರಾತ್ ನಿಂದ ತರಿಸಲಾಗುತಿತ್ತು, ಕಂಪನಿಗೆ ಲಾರಿಯಲ್ಲಿ ಬರುತ್ತಿದ್ದ Polypropylene ಕಚ್ಚಾ ಸರಕುಗಳನ್ನು ಕಂಪನಿಯಲ್ಲಿ ಸ್ಟೋರ್ ಕೀಪರ್ ಆಗಿ ಕೆಲಸ ಮಾಡುತ್ತಿದ್ದ ಮಹೇಶ್ ಕುಲಾಲ್ ಎಂಬಾತನು ಕಂಪನಿಗೆ ಬಂದ ಕಚ್ಚಾ ಸರಕುಗಳನ್ನು ಕಂಪನಿಯಲ್ಲಿ ಸ್ವೀಕೃತಿಗೊಂಡಂತೆ ಪೋರ್ಜರಿ ದಾಖಲಾತಿಗಳನ್ನು ಸೃಷ್ಟಿಸಿಕೊಂಡು ಕಂಪನಿಗೆ ತಿಳಿಯದಂತೆ ಇತರೊಂದಿಗೆ ಸೇರಿಕೊಂಡು 2019 ನೇ ಡಿಸೆಂಬರ್ ತಿಂಗಳಿನಿಂದ 2022 ಜನವರಿ ತಿಂಗಳ ವರೆಗೆ ಕೋಟ್ಯಾಂತರ ಮೌಲ್ಯದ 36 ಟ್ರಕ್ ಗಳಲ್ಲಿ ಬಂದ Polypropylene ಕಚ್ಚಾ ಸರಕುಗಳನ್ನುಕಳವು ಮಾಡಿದ್ದು, ಕಳವು ಮಾಡಿದ ಕಚ್ಚಾ ಸರಕುಗಳನ್ನು ಮಹೇಶ್ ಕುಲಾಲ್ ನ ಸ್ನೇಹಿತನಾದ ಅನಂತ ಸಾಗರ ಎಂಬಾತನಿಗೆ ನೀಡಿದ್ದು, ಅನಂತ ಸಾಗರನು ಈ ಕಚ್ಚಾ ಸರಕುಗಳನ್ನು ಅನಂತ ಸಾಗರ್ ಕೆಲಸ ಮಾಡುವ ಬೈಕಂಪಾಡಿಯ ವಿಧಿ ಎಂಟರ್ ಪ್ರೈಸಸ್ ನ ಹೆಸರಿನಲ್ಲಿ ನಕಲಿ ಬಿಲ್ಲುಗಳನ್ನು ಮಾಡಿ ಅದನ್ನು ಬೆಂಗಳೂರಿನ ಹೆಚ್ ಎಸ್ ಪಾಲಿಮಾರ್ ನ ಆರೋಪಿ ಕಿರಣ್ ಸಾಮಾನಿ ಎಂಬವರಿಗೆ ಮಾರಾಟ ಮಾಡಿರುತ್ತಾರೆ. ಆರೋಪಿಗಳು ಕೋಟಿ ಮೌಲ್ಯದ 36 ಲೋಡ್ ಸುಮಾರು 840 ಟನ್ Polypropylene ಕಚ್ಚಾ ಸರಕುಗಳನ್ನು ಕಂಪನಿಗೆ ಗೊತ್ತಿಲ್ಲದೆ ಕಳವು ಮಾಡಿ ಅದನ್ನು ಮಾರಾಟ ಮಾಡಿರುತ್ತಾರೆ.
ಆರೋಪಿ ಮಹೇಶ್ ಕುಲಾಲ್ ನು ಬ್ರೈಟ್ ಕಂಪನಿಯಿಂದ Polypropylene ಕಚ್ಚಾ ಸರಕುಗಳನ್ನು ಕಳವು ಮಾಡಿ ಮಾರಾಟ ಮಾಡಿದ ಹಣದಲ್ಲಿ ಮಂಗಳೂರಿನ ವಿವಿಧ ಕಡೆಗಳಲ್ಲಿ ಜಮೀನು ಖರೀದಿ ಮಾಡಿದ್ದು, ಅಲ್ಲದೇ ಐಶಾರಾಮಿ ಕಾರುಗಳನ್ನು ಖರೀದಿ ಮಾಡಿ ಐಶಾರಾಮಿ ಜೀವನ ನಡೆಸುತ್ತಿದ್ದನು. ಅಲ್ಲದೇ ತನ್ನ ಪತ್ನಿಯ ಹೆಸರಿನಲ್ಲಿ ಬ್ಯಾಂಕ್ ನಲ್ಲಿ ಹಣ ಠೇವಣಿ ಇರಿಸಿ, ಇನ್ಸೂರೆನ್ಸ್, Share market ನಲ್ಲಿ ಹೂಡಿಕೆ ಮಾಡಿರುತ್ತಾನೆ. ಅಲ್ಲದೇ ಪತ್ನಿಯ ಹೆಸರಿನಲ್ಲಿ ನಗರದ 3 ಕಡೆಗಳಲ್ಲಿ ಐಷಾರಾಮಿ ಸೆಲೂನ್ ಗಳನ್ನು ಹೊಂದಿರುತ್ತಾನೆ. ಅನಂತ ಸಾಗರನು ಐಷಾರಾಮಿ ಮನೆಯನ್ನು ಕಟ್ಟಿಸಿ ಐಷಾರಾಮಿ ಕಾರನ್ನು ಖರೀದಿ ಮಾಡಿ ಐಶಾರಾಮಿ ಜೀವನ ಸಾಗಿಸುತ್ತಿದ್ದನು.