Connect with us

DAKSHINA KANNADA

ಮಂಗಳೂರು : ಎಂಡೋಸಲ್ಫಾನ್ ಸಂತ್ರಸ್ಥರಿಗಾಗಿ ವಿಶೇಷ ಆರೋಗ್ಯ ತಪಾಸಣಾ ಶಿಬಿರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜ್‍ಗಳ ಸಹಯೋಗದೊಂದಿಗೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಆಯೋಜಿಸಲಾಗಿದೆ.

ಮಂಗಳೂರು,ನ.15 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜ್‍ಗಳ ಸಹಯೋಗದೊಂದಿಗೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಆಯೋಜಿಸಲಾಗಿದೆ.

ನವೆಂಬರ್ 16 ರಂದು ಪುತ್ತೂರು ತಾಲೂಕಿನ ಪಾಣಾಜೆ, ನವೆಂಬರ್ 19ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲಾ, ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ ಹಾಗೂ ನವೆಂಬರ್ 20 ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿದೆ. ಶಿಬಿರದ ಸದುಪಯೋಗವನ್ನು ಎಂಡೋಸಲ್ಫಾನ್ ಸಂತ್ರಸ್ತರು ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ  ತಿಳಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *