LATEST NEWS
ಮಂಗಳೂರಿನಲ್ಲಿ ಮುಂದುವರೆದ ಮಳೆ ಅಬ್ಬರ – ದೇರೆಬೈಲ್ ನ ಒಳ ರಸ್ತೆ ಕುಸಿತ
ಮಂಗಳೂರು ಅಕ್ಟೋಬರ್ 13: ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಾಗೂ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ಐದು ದಿನಗಳವರೆಗೆ ಗುಡುಗು, ಸಿಡಿಲು ಸಹಿತ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ದಕ್ಷಿಣಕನ್ನಡದಲ್ಲೂ ಮಳೆ ಅಬ್ಬರ ಜೊರಾಗಿದ್ದು, ನಿನ್ನೆಯಿಂದ ಸುರಿಯುತ್ತಿರುವ ಮಳೆಗೆ ಹಲವು ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಅವಾಂತರ ಸೃಷ್ಠಿಸಿದ್ದು, ರಸ್ತೆಗಳಲ್ಲಿ ಕೃತಕ ನೆರೆ ಉಂಟಾಗಿದೆ.
ಸುರಿಯುತ್ತಿರುವ ಧಾರಾಕಾರ ಮಳೆಗೆ ದೇರೆಬೈಲ್ ಸಮೀಪದ ಲ್ಯಾಂಡ್ ಲಿಂಕ್ಸ್ ಒಳ ರಸ್ತೆ ಕುಸಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಮೂರು ತಿಂಗಳ ಹಿಂದೆ ಇಲ್ಲಿ ಸಣ್ಣ ಗುಂಡಿಯೊಂದು ಕಾಣಿಸಿದ್ದು, ತಕ್ಷಣ ಸ್ಥಳೀಯರು ಜನಪ್ರತಿನಿಧಿಗಳ, ಅಧಿಕಾರಿಗಳ ಗಮನ ಸೆಳೆದಿದ್ದರು. ಅದರಂತೆ ಮೇಯರ್ ಪ್ರೇಮಾನಂದ ಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿ ದುರಸ್ತಿ ಪಡಿಸುವುದಾಗಿ ಭರವಸೆ ನೀಡಿದ್ದರು. ಆದರೆ ದುರಸ್ತಿ ಪಡಿಸದ ಕಾರಣ ರಸ್ತೆಯಲ್ಲಿ ದೊಡ್ಡ ಗುಂಡಿ ಬಿದ್ದಿದೆ.