Connect with us

LATEST NEWS

ಮಂಗಳೂರು ವಿಮಾನ ನಿಲ್ದಾಣದಲ್ಲಿ ಒಂದು ವಾರದಲ್ಲಿ ಮೂರು ಅಕ್ರಮ ಚಿನ್ನ ಸಾಗಾಟ ಪ್ರಕರಣ ಪತ್ತೆ

ಮಂಗಳೂರು ಜನವರಿ 29: ಒಂದು ವಾರದಲ್ಲಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಾಟಕ್ಕೆ ಯತ್ನಿಸಿದ್ದ ಮೂರು ಪ್ರಕರಣಗಳನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದು 1.68 ಕೆಜಿ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.


ಇತ್ತೀಚೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಪ್ರಕರಣ ಹೆಚ್ಚಾಗುತ್ತಿದ್ದು, ಬಹುತೇಕ ಪ್ರಕರಣಗಳಲ್ಲಿ ಆರೋಪಿಗಳು ಚಿನ್ನವನ್ನು ಪೆಸ್ಟ್ ರೂಪದಲ್ಲಿ ಕರಗಿಸಿ ತಮ್ಮ ಗುದದ್ವಾರದಲ್ಲಿ ಅಡಗಿಸಿಟ್ಟುಕೊಂಡು ಸಾಗಾಟಕ್ಕೆ ಯತ್ನಿಸಿದ್ದಾರೆ. ಆದರೆ ತಪಾಸಣೆ ವೇಳೆ ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ.


ಈ ಒಂದು ವಾರದಲ್ಲಿ ಮೂರು ಅಕ್ರಮ ಚಿನ್ನ ಸಾಗಾಟ ಪ್ರಕರಣವನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಜನವರಿ 25 ಹಾಗೂ ಇನ್ನೊಂದು ಪ್ರಕರಣ ಜನವರಿ 28 ರಂದು ನಡೆದಿದ್ದು, ಈ ಮೂರು ಪ್ರಕರಣಗಳಲ್ಲಿ 863 ಗ್ರಾಂ, 436 ಗ್ರಾಂ ಮತ್ತು 557 ಗ್ರಾಂ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ. ವಶಕ್ಕೆ ಪಡೆಯಲಾದ ಚಿನ್ನದ ಒಟ್ಟು ಮೌಲ್ಯ 84.35 ಲಕ್ಷ ಎಂದು ಅಂದಾಜಿಸಲಾಗಿದೆ. ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.