DAKSHINA KANNADA
ಮಂಗಳೂರು: ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

ಮಂಗಳೂರು, ಮಾರ್ಚ್ 17: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1,08,28,240 ರೂ.ಮೌಲ್ಯದ ಚಿನ್ನ ಅಕ್ರಮ ಸಾಗಾಟವನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.
ಫೆ.16ರಿಂದ 28ರ ಮಧ್ಯೆ ಓರ್ವ ಮಹಿಳೆ ಹಾಗೂ ಆರು ಮಂದಿ ಪುರುಷ ಪ್ರಯಾಣಿಕರನ್ನು ಚಿನ್ನ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದಾಗ ಪತ್ತೆ ಮಾಡಲಾಗಿದೆ. ಆರೋಪಿಗಳು ಚಿನ್ನವನ್ನು ಪೇಸ್ಟ್ ಮಾಡಿ ಟಿ ಶರ್ಟ್‌ನಲ್ಲಿ ಅಳವಡಿಸಿ, ಗುದದ್ವಾರದಲ್ಲಿ ಅಡಗಿಸಿಟ್ಟು ಸಾಗಾಟ ಮಾಡಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಕ್ರಮ ಸಾಗಾಟದ ಚಿನ್ನ ವಶಕ್ಕೆ ಪಡೆದು ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.