Connect with us

    LATEST NEWS

    ಮಂಗಳೂರು – ಕಲ್ಲುರ್ಟಿ ಕಲ್ಕುಡ ದೈವಗಳ ಹರಕೆ ಕೋಲ ನೇರವೇರಿಸಿದ ವಿಧಾನಸಭಾಧ್ಯಕ್ಷ ಯು.ಟಿ ಖಾದರ್

    ಮಂಗಳೂರು ಫಬ್ರವರಿ 05: ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ತಮ್ಮ ಹರಕೆಯ ಕೋಲವೊಂದನ್ನು ನೇರವೇರಿಸಿದ್ದಾರೆ. ಶ್ರೀ ಕ್ಷೇತ್ರ ಪನೋಲಿ ಬೈಲ್‌ನಲ್ಲಿ ತುಳುನಾಡಿನ ಕಾರ್ಣಿಕ ದೈವಗಳಾದ ಕಲ್ಲುರ್ಟಿ ಕಲ್ಕುಡ ದೈವಗಳ ಹರಕೆ ಕೋಲ ನೆರವೇರಿಸಿದ್ದಾರೆ.


    ಬಂಟ್ವಾಳ ತಾಲೂಕಿನ ಶ್ರೀ ಕ್ಷೇತ್ರ ಪನೋಲಿ ಬೈಲ್‌ನಲ್ಲಿ ನಡೆದ ತುಳುನಾಡಿನ ಕಾರ್ಣಿಕ ದೈವಗಳಾದ ಕಲ್ಲುರ್ಟಿ ಕಲ್ಕುಡ ದೈವಗಳ ಹರಕೆ ಕೋಲದಲ್ಲಿ ವಿಧಾನ ಸಭಾಧ್ಯಕ್ಷ ಯು ಟಿ ಖಾದರ್ ಅವರು ಭಾಗವಹಿಸಿ ಕಾರ್ಣಿಕ ದೈವಗಳಾದ ಕಲ್ಲುರ್ಟಿ ಕಲ್ಕುಡ ದೈವಗಳ ಆಶೀರ್ವಾದ ಪಡೆದರು. ಸ್ಥಳೀಯ ಮುಖಂಡರೊಂದಿಗೆ ಪೂಜಾ ಕೈಂಕರ್ಯಗಳಲ್ಲಿ ಭಾಗಿಯಾಗಿದ್ದ ಖಾದರ್, ಸಂಪ್ರದಾಯ ಬದ್ಧವಾಗಿ ಕೋಲ ನೆರವೇರಿಸಿ ಕಲ್ಲುರ್ಟಿ-ಕಲ್ಕುಡ ದೈವಗಳ ಆಶೀರ್ವಾದ ಪಡೆದಿದ್ದಾರೆ.


    ಈ ನಡುವೆ ಖಾದರ್ ಅವರು ಹರಕೆ ಕೋಲ ನೆರವೇರಿಸಿದ್ದಕ್ಕೆ ಮುಸ್ಲಿಂ ಮುಖಂಡನೋರ್ವ ವಿರೋಧ ವ್ಯಕ್ತಪಡಿಸಿದ್ದಾರೆ. ಮುಸ್ಲಿಂ ಧಾರ್ಮಿಕ ಮುಖಂಡ ಸಾಲೆತ್ತೂರು ಫೈಝಿ ಎಂಬುವವರು ಯು.ಟಿ. ಖಾದರ್ ಬಗ್ಗೆ ಆಕ್ಷೇಪಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply