LATEST NEWS
ಮಂಗಳೂರು ವಿಮಾನ ನಿಲ್ದಾಣ ಪರಿಸರದಲ್ಲಿ ಚಿರತೆ ವಾಕಿಂಗ್…!!
ಮಂಗಳೂರು ನವೆಂಬರ್ 08: ಮಂಗಳೂರು ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆಯೊಂದು ತಿರುಗಾಟ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನವೆಂಬರ್ 8 ರ ಮುಂಜಾನೆ ಅಧಿಕಾರಿಯೊಬ್ಬರು ಕಾರಿನಲ್ಲಿ ಬರುತ್ತಿದ್ದ ವೇಳೆ ಚಿರತೆ ರಸ್ತೆಯಲ್ಲಿ ಕಾಣ ಸಿಕ್ಕಿದೆ. ಕೂಡಲೇ ಅಧಿಕಾರಿ ತನ್ನ ಮೊಬೈಲ್ ನಿಂದ ಚಿರತೆ ದೃಶ್ಯವನ್ನು ಸೆರೆ ಹಿಡಿದು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ವಿಮಾನ ನಿಲ್ದಾಣ ಪರಿಸರದಲ್ಲಿ ಚಿರತೆ ಕಾಣಿಸಿಕೊಂಡಿರುವ ಕುರಿತು ಅಧಿಕಾರಿಗಳು ನೀಡಿದ ಮಾಹಿತಿಯ ಮೇರೆಗೆ ಅರಣ್ಯ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.