Connect with us

    KARNATAKA

    ಹಮಾಸ್ ಉಗ್ರರನ್ನು ದೇಶ ಪ್ರೇಮಿಗಳೆಂದು ಕರೆದ ಮಂಗಳೂರಿನ ಝಾಕಿರ್ – ವಿಡಿಯೋ ವೈರಲ್

    ಮಂಗಳೂರು ಅಕ್ಟೋಬರ್ 14: ಇಸ್ರೇಲ್​ ಮತ್ತು ಪ್ಯಾಲೆಸ್ತೀನ್​ನ ಹಮಾಸ್ ​ಉಗ್ರರ ನಡುವೆ ನಡೆಯುತ್ತಿರುವ ಯುದ್ದ ಮುಂದುವರೆದಿದ್ದು, ಹಮಾಸ್ ಉಗ್ರರ ಮಟ್ಟ ಹಾಕದೇ ಬಿಡುವುದಿಲ್ಲ ಎಂದು ಇಸ್ರೇಲ್ ಹೇಳಿದೆ. ಈ ನಡುವೆ ಮಂಗಳೂರಿನ ವ್ಯಕ್ತಿಯೊಬ್ಬರು ಹಮಾಸ್ ಉಗ್ರರನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟಿದ್ದಾರೆ.


    ಮಂಗಳೂರಿನ ಬಂದರು ಪ್ರದೇಶದಲ್ಲಿ ತಾಲಿಬನ್‌ ಎಂಬ ಹೆಸರಿನಲ್ಲಿ ಗುರುತಿಸಿಕೊಳ್ಳುವ ಝಾಕಿರ್ “ಹಮಾಸ್ ಉಗ್ರರರನ್ನು ದೇಶ ಪ್ರೇಮಿಗಳು” ಎಂದು ಕರೆದಿದ್ದಾನೆ.

    ಪ್ಯಾಲೆಸ್ತೀನ್​, ಗಾಝಾ ಹಾಗೂ ಹಮಾಸ್ ದೇಶಪ್ರೇಮಿ ಯೋಧರಿಗೆ ಜಯ ಸಿಗಲಿ. ಹಮಾಸಿಗರು​​ ದೇಶ ಪ್ರೇಮಿ ಯೋಧರು. ವಿಶ್ವ ಕಬರಸ್ಥಾನ್ ಸಂಘದ ಸದಸ್ಯರು ಪ್ರತ್ಯೇಕ ಪ್ರಾರ್ಥನೆ‌ ಸಲ್ಲಿಸಬೇಕು ಎಂದು ಝಾಕಿರ್ ಹೇಳಿದ್ದಾನೆ. ಸಾಮಾಜಿಕ ಜಾಲತಾಣದಲ್ಲಿ ಝಾಕಿರ್ ವಿಡಿಯೋ ವೈರಲ್ ಆಗಿದ್ದು, ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಹಿಂದೂ‌ ಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದು, ಝಾಕಿರ್​ನನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿದ್ದಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *