Connect with us

    LATEST NEWS

    ಮಂಗಳೂರು : ಮನೆ ಕಳ್ಳತನ ಭೇದಿಸಿದ ಮುಲ್ಕಿ ಪೊಲೀಸರು, ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ..!

    ಮಂಗಳೂರು ಪೊಲೀಸ್ ಕಮಿಷನರೇಟ್ ನ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾರ್ನಾಡು ಗ್ರಾಮದ ಲಿಂಗಪ್ಪಯ್ಯಕಾಡು ಬಿಜಾಪುರ ಕಾಲನಿ ಎಂಬಲ್ಲಿ ಮನೆಯೊಂದರಿಂದ ಚಿನ್ನಾಭರಣ ಕಳ್ಳತನ ಮಾಡಿದ ಆರೋಪಿಯನ್ನು ಮುಲ್ಕಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ.

    ಮಂಗಳೂರು : ಮಂಗಳೂರು ಪೊಲೀಸ್ ಕಮಿಷನರೇಟ್ ನ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾರ್ನಾಡು ಗ್ರಾಮದ ಲಿಂಗಪ್ಪಯ್ಯಕಾಡು ಬಿಜಾಪುರ ಕಾಲನಿ ಎಂಬಲ್ಲಿ ಮನೆಯೊಂದರಿಂದ ಚಿನ್ನಾಭರಣ ಕಳ್ಳತನ ಮಾಡಿದ ಆರೋಪಿಯನ್ನು ಮುಲ್ಕಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ.

    ಆರೋಪಿಯಿಂದ ಕಳ್ಳತನ ಮಾಡಿದ ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ನವೆಂಬರ್ 6 ರಂದು ಹಗಲು ವೇಳೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾರ್ನಾಡು ಗ್ರಾಮದ ಲಿಂಗಪ್ಪಯ್ಯಕಾಡು ಬಿಜಾಪುರ ಕಾಲನಿ ಎಂಬಲ್ಲಿರುವ ಶ್ರೀಮತಿ ಮಲ್ಲಮ್ಮ ಎಂಬವರ ಮನೆಯ ಹಿಂಬಾಗಿಲಿನ ಬೀಗವನ್ನು ತೆರೆದು ಮನೆಯ ಒಳಗಿದ್ದ ಸುಮಾರು 64.200 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳವು ಮಾಡಿದ ಬಗ್ಗೆ ಮುಲ್ಕಿ ಠಾಣೆಗೆ ಶ್ರೀಮತಿ ಮಲ್ಲಮ್ಮ ಎಂಬವರು ನೀಡಿದ ದೂರಿನಂತೆ ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ಆರಂಭಿಸಿದ್ದ ಮುಲ್ಕಿ ಠಾಣಾ ಪೊಲೀಸ್ ನಿರೀಕ್ಷಕ ವಿದ್ಯಾಧರ ಡಿ ಬಾಯ್ಕರಿಕ‌ ಮತ್ತು ಸಿಬ್ಬಂದಿ ಮೂಲತ ಬಿಜಾಪುರ ಸಿಂದಗಿ ತಾಲೂಕಿನ ದೇವರ ಹಿಪ್ಪರಗಿ ಗ್ರಾಮದ ಪ್ರಸ್ತುತ ಮುಲ್ಕಿಯ ಲಿಂಗಪ್ಪಯ್ಯ ಕಾಡಿನಲ್ಲಿ ವಾಸವಿರುವ ಆರೋಪಿ ಅರುಣ್(20) ನನ್ನು ದಸ್ತಗಿರಿ ಮಾಡಿ ಕಳವಿಗೆ ಸಂಬಂಧಿಸಿದ ಒಟ್ಟು ಒಟ್ಟು ರೂ. 2,56,000 ಮೌಲ್ಯದ 64.200 ಗ್ರಾಂ ಚಿನ್ನಾಭರಣಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
    ಮಂಗಳೂರು ನಗರದ ಮಾನ್ಯ ಪೊಲೀಸ್ ಆಯುಕ್ತರಾದ ಅನುಪಮ್ ಅಗರವಾಲ್, ಐ.ಪಿ.ಎಸ್ ರವರ ಮಾರ್ಗದರ್ಶನದಂತೆ, ಕಾನೂನು & ಸುವ್ಯವಸ್ಥೆ ವಿಭಾಗದ ಡಿಸಿಪಿ ಸಿದ್ದಾರ್ಥ ಗೋಯಲ್ ಐ.ಪಿ.ಎಸ್ ಮತ್ತು ಅಪರಾಧ & ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ನಿರ್ದೇಶನದಂತೆ, ಮಂಗಳೂರು ಉತ್ತರ ವಿಭಾಗದ ಎ.ಸಿ.ಪಿ. ಶ್ರೀಕಾಂತ್ ರವರ ನೇತೃತ್ವದಲ್ಲಿ ಮುಲ್ಕಿ ಠಾಣಾ ನಿರೀಕ್ಷಕರಾದ ವಿದ್ಯಾಧರ ಡಿ ಬಾಯ್ಕರಿಕರ್ ರವರು ಕಾರಚರಣೆ ನಡೆಸಿದ್ದು ಈ ಕಾರಚರಣೆಯಲ್ಲಿ ಮುಲ್ಕಿ ಪೊಲೀಸ್‌ ಠಾಣೆಯ ಪಿ.ಎಸ್.ಐ. ಅನಿತಾ ಹೆಚ್.ಬಿ, ಎ.ಎಸ್.ಐ ಹರಿಶೇಖರ್, ಹೆಡ್ ಕಾನ್ ಸ್ಟೇಬಲ್ ಶಶಿಧರ, ಚಂದ್ರಶೇಖರ್, ಜಾಯ್ಸ್ ಸುಚಿತಾ ಡಿ ಸೋಜ, ಕಾನ್ ಸ್ಟೇಬಲ್ ಗಳಾದ ಸುನೀಲ್ ಮತ್ತು ಮ.ಪಿ.ಸಿ. ಚಿತ್ರಾ ರವರು ಸಹಕರಿಸಿದ್ದರು.

    ಕರಾವಳಿಯಲ್ಲಿ ಮತ್ತೊಂದು ಬಹುಕೋಟಿ ಕೋ-ಆಪರೇಟಿವ್ ಬ್ಯಾಂಕ್ ಹಗರಣ..!!!?

    ಮಹಾಲಕ್ಷ್ಮಿ ಬ್ಯಾಂಕ್ ವಿರುದ್ಧ ಎಸ್ಐಟಿ ತನಿಖೆಗೆ ಆಗ್ರಹ

     

     

    Share Information
    Advertisement
    Click to comment

    Leave a Reply

    Your email address will not be published. Required fields are marked *