Connect with us

    DAKSHINA KANNADA

    ಮಂಗಳೂರು – ನಡುರಸ್ತೆಯಲ್ಲೇ ನಮಾಜ್ -ವಿಡಿಯೋ ವೈರಲ್

    ಮಂಗಳೂರು, ಮೇ 27: ಮಂಗಳೂರಿನಲ್ಲಿ ನಡು ರಸ್ತೆಯಲ್ಲಿ ನಮಾಜ್ ಮಾಡಿ ವಿಡಿಯೋ ಒಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಂಗಳೂರಿನ ಕಂಕನಾಡಿಯಲ್ಲಿ ನಡು ರಸ್ತೆಯಲ್ಲೇ ಮುಸ್ಲಿಮರು ನಮಾಜ್ ಮಾಡಿದ್ದಾರೆ. ಕಳೆದ ಶುಕ್ರವಾರ ಘಟನೆ ನಡೆದಿದ್ದು, ನಮಾಜ್​ ಮಾಡಿದ ವಿಡಿಯೋ ಎಲ್ಲಡೆ ಹರಿದಾಡುತ್ತಿದೆ.


    ಕಂಕನಾಡಿಯಲ್ಲಿನ ಮಸೀದಿ ಮುಂದೆ ಇರುವ ರಸ್ತೆಯಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಮಾಡಿದ್ದಾರೆ. ಇದರಿಂದ ವಾಹನ ಸವಾರರಿಗೆ ತೊಂದರೆಯಾಗಿದೆ. ನಡು ರಸ್ತೆಯಲ್ಲಿ ನಮಾಜ್​​ ಮಾಡುತ್ತಿದ್ದರಿಂದ ವಾಹನ ಸವಾರರು ಯೂಟರ್ನ್ ತೆಗೆದುಕೊಂಡು ಹೋಗಿದ್ದಾರೆ.

    ಕದ್ರಿ​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮುಸ್ಲಿಮರು ನಮಾಜ್​ ಮಾಡಿದನ್ನು ಮೊಬೈಲ್​ನಲ್ಲಿ ಸೆರೆಹಿಡಿಯಲಾಗಿದ್ದು, ಅಸಮದಾನ ವ್ಯಕ್ತವಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply