Connect with us

    LATEST NEWS

    ಮಂಗಳೂರು – ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಯುವಕ

    ಮಂಗಳೂರು ಮಾರ್ಚ್ 20: ನವ ವಿವಾಹಿತ ಯುವಕನೋರ್ವ ಸಂಬಂಧಿಕರ ಮನೆಯಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮುಚ್ಚಿಲಕೋಡಿ ಎಂಬಲ್ಲಿ ಭಾನುವಾರ ಸಂಜೆ ಸಂಭವಿಸಿದೆ.
    ಮೃತರನ್ನು ವಿಟ್ಲ ಕನ್ಯಾನ ನಿವಾಸಿ ಬಾಬು ಶೆಟ್ಟಿಗಾರ್ ಎಂಬವರ ಪುತ್ರ ಹರೀಶ್ (33) ಎಂದು ಗುರುತಿಸಲಾಗಿದೆ. ಇವರು 10 ವರ್ಷಗಳಿಂದ ಮುಡಿಪುವಿನ ಇನ್ಫೋಸಿಸ್ ಸಂಸ್ಥೆಯಲ್ಲಿ ಗಾರ್ಡನ್ ಕೆಲಸ ನಿರ್ವಹಿಸುತ್ತಿದ್ದರು.


    ಮಾರ್ಚ್ 12 ರಂದು ಹರೀಶ್ ತನ್ನ ತಾಯಿಯ ಅಕ್ಕನ ಮಗನಾಗಿರುವ ಕೊಣಾಜೆ ಮುಚ್ಚಿಲಕೋಡಿ ನಿವಾಸಿ ರಮೇಶ್ ಶೆಟ್ಟಿಗಾರ್ ಎಂಬವರಿಗೆ ಕರೆ ಮಾಡಿ ತನ್ನ ಬ್ಯಾಗಿನಲ್ಲಿ ಭಸ್ಮ, ತಗಡು ದೊರೆತಿದ್ದು, ವಾಮಾಚಾರ ಮಾಡಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಸಹೋದರ ರಮೇಶ್ ಮಾರ್ಚ್ 19 ಭಾನುವಾರ ಮನೆಗೆ ಬಂದು ಮಾತನಾಡುವ ಎಂದು ತಿಳಿಸಿರುವಂತೆ ಹರೀಶ್ ಅವರು ಮಾತುಕತೆಗೆಂದು ಬಂದಿದ್ದರು. ಆದರೆ ಬರುವಾಗಲೇ ಕೈಯಲ್ಲಿ ಪೆಟ್ರೋಲ್ ಅನ್ನು ಕ್ಯಾನಿನಲ್ಲಿ ಹಿಡಿದುಕೊಂಡು ಬಂದಿದ್ದಾರೆ.

    ಮಾತುಕತೆ ಆರಂಭವಾಗುವ ಮುನ್ನವೇ ಅಂಗಳದಲ್ಲಿ ಮೈಪೂರ್ತಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮನೆಮಂದಿ ಗಾಬರಿಗೊಂಡು ಕೊಣಾಜೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೊಣಾಜೆ ಪೊಲೀಸರು ತಕ್ಷಣ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಹರೀಶ್ ಸಾವನ್ನಪ್ಪಿದ್ದಾರೆ. ಅರೆಬೆಂದ ಸ್ಥಿತಿಯಲ್ಲಿದ್ದ ಹರೀಶ್ ಖುದ್ದಾಗಿಯೇ ಆಂಬ್ಯುಲೆನ್ಸ್ ಹತ್ತಿದ್ದರು.

    Share Information
    Advertisement
    Click to comment

    Leave a Reply

    Your email address will not be published. Required fields are marked *