ಮಂಗಳೂರು ನಗರ ಕೇಂದ್ರ ರೌಡಿ ನಿಗ್ರಹ ದಳದಿಂದ ಇಬ್ಬರು ಸರಗಳ್ಳರ ಬಂಧನ

ಮಂಗಳೂರು ಡಿಸೆಂಬರ್ 10: ಮಂಗಳೂರು ನಗರ ವ್ಯಾಪ್ತಿಯಲ್ಲಿ ನಡೆದ ಸರಗಳ್ಳತನಕ್ಕೆ ಸಂಬಂಧಿಸಿದಂತೆ ಇಬ್ಬರು ಸರಗಳ್ಳರನ್ನು ಬಂಧಿಸುವಲ್ಲಿ ಮಂಗಳೂರು ನಗರದ ಕೇಂದ್ರ ರೌಡಿ ನಿಗ್ರಹ ದಳದ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳನ್ನು ಮಂಗಳೂರು ನಿವಾಸಿಗಳಾದ ಹರಿಶ್ ಎಸ್ ನಾಥ್ ಹಾಗೂ ರಾಜೇಶ್ ಎಂದು ಗುರುತಿಸಲಾಗಿದೆ. ಬಂಧಿತರಿಂದ 7 ಸರಗಳ್ಳತನ ಪ್ರಕರಣಗಳಿಗೆ ಸಂಬಂಧಿಸಿದ ರೂ.3,64.000/- ಮೌಲ್ಯದ ಒಟ್ಟು 126.960 ಗ್ರಾಂ ಚಿನ್ನದ ಆಭರಣಗಳು ಮತ್ತು ಆಕ್ಟಿವಾ ಸ್ಕೂಟರ್ ಸಮೇತ ಒಟ್ಟು 3,74.000/- ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮಂಗಳೂರು ನಗರದಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯರ ಕತ್ತಿನಲ್ಲಿದ್ದ ಚಿನ್ನದ ಸರಗಳನ್ನು ಆಕ್ಟೀವಾ ಸ್ಕೂಟರ್ ನಲ್ಲಿ ಬರುವ ಇಬ್ಬರು ಸುಲಿಗೆ ಮಾಡಿಕೊಂಡು ಹೋದ ಬಗ್ಗೆ ಉರ್ವ ಪೊಲೀಸ್ ಠಾಣೆ ಯಲ್ಲಿ1 ಪ್ರಕರಣ, ಬರ್ಕೆ ಪೊಲೀಸ್ ಠಾಣೆಯಲ್ಲಿ 2. ಪ್ರಕರಣ, ಕದ್ರಿ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ,ಕಾವೂರು ಠಾಣೆಯಲ್ಲಿ 1 ಪ್ರಕರಣ ಮತ್ತು ದಕ್ಷಿಣ ಠಾಣೆ ಯಲ್ಲಿ 2 ಸುಲಿಗೆ ಯತ್ನ ಪ್ರಕರಣಗಳು ದಾಖಲಾಗಿರುತ್ತವೆ.

Facebook Comments

comments