Connect with us

LATEST NEWS

ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ 38 ಶ್ರೀಲಂಕಾ ಪ್ರಜೆಗಳು ಪೊಲೀಸ್ ವಶಕ್ಕೆ

ಮಂಗಳೂರು ಜೂನ್ 11: ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ 38 ಜನ ಶ್ರೀಲಂಕಾ ಪ್ರಜೆಗಳನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಈ ಕುರಿತಂತೆ ಮಾಹಿತಿ ನೀಡಿದ ಪೊಲೀಸ್ ಆಯುಕ್ತ ಶಶಿಕುಮಾರ್ ಬಂಧಿತರು ಶ್ರೀಲಂಕಾದಿಂದ ಮಾರ್ಚ್ 17ಕ್ಕೆ ಹೊರಟು ತಮಿಳುನಾಡಿಗೆ ಬಂದಿದ್ದಾರೆ. ಇವರಲ್ಲಿ ಬಹುತೇಕ ಮಂದಿ ಶ್ರೀಲಂಕಾದ ಉತ್ತರ ಭಾಗದವರು. ಶ್ರೀಲಂಕಾದಿಂದ ತಮಿಳುನಾಡಿನ ತೂತುಕುಡಿಗೆ ಬಂದು ಅಲ್ಲಿಂದ ಕೆನಡಾಗೆ ಹೋಗುವವರಿದ್ದರು.

 

ಆದರೆ ತಮಿಳುನಾಡು ಚುನಾವಣೆ ಹಿನ್ನೆಲೆ ಅವರನ್ನ ಮಂಗಳೂರಿಗೆ ತಂದು ಬಿಡಲಾಗಿತ್ತು. ಅಲ್ಲಿ ಚುನಾವಣೆ ಹಿನ್ನೆಲೆ ತಪಾಸಣೆ ಕಾರ್ಯ ಚುರುಕಾಗಿದ್ದ ಹಿನ್ನೆಲೆ ಇವರು ಮಂಗಳೂರಿಗೆ ಆಗಮಿಸಿದ್ದಾರೆ. ಇನ್ನು ಮಂಗಳೂರಿಗೆ ಬಂದು ಎರಡು ಲಾಡ್ಜ್ ಮತ್ತು ಎರಡು ಮನೆಗಳಲ್ಲಿ ವಾಸ್ತವ್ತ ಹೂಡಿದ್ದರು. ಮಾಹಿತಿ ಹಿನ್ನಲೆ ಕಾರ್ಯಾಚರಣೆ ನಡೆಸಿ 38 ಜನರನ್ನು ವಶಕ್ಕೆ ಪಡೆಯಲಾಗಿದ್ದು, ಉಳಿದವರ ಹುಡುಕಾಟ ನಡೆದಿದೆ ಎಂದರು.


ಇನ್ನು ಶ್ರೀಲಂಕಾ ಪ್ರಜೆಗಳಿಗೆ ಮಂಗಳೂರಿನಲ್ಲಿ ಇವರಿಗೆ ಆಶ್ರಯ ಕೊಡಲು ನೆರವು ನೀಡಿದವರ ಬಗ್ಗೆಯೂ ತನಿಖೆ ಆರಂಭವಾಗಿದೆ. ಇವರಿಗೆ ಆಶ್ರಯ ಕೊಟ್ಟ ಕಾರಣ ಮತ್ತು ನೆರವು ನೀಡಿದ ಕಾರಣ ಇಲ್ಲಿನ ಆರು ಜನರನ್ನ ವಶಕ್ಕೆ ಪಡೆಯಲಾಗಿದೆ ಎಂದರು.,
ವಶಕ್ಕೆ ಪಡೆದವರಲ್ಲಿ ಕೆಲವರು ಇಂಗ್ಲೀಷ್ ಮಾತನಾಡ್ತಿದಾರೆ, ಬಹುತೇಕ ತಮಿಳು ‌ಮಾತನಾಡುವವರಿದ್ದಾರೆ. ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.