Connect with us

    LATEST NEWS

    ಮಂಗಳೂರು – ಮಾದಕ ವಸ್ತು MDMA ಮಾರಾಟ ಮಾಡುತ್ತಿದ್ದ ಓರ್ವನ ಸೆರೆ

    ಮಂಗಳೂರು ಸೆಪ್ಟೆಂಬರ್ 12: ಮಂಗಳೂರಿನಲ್ಲಿ ಸಾರ್ವಜನಿಕರಿಗೆ ವಿದ್ಯಾರ್ಥಿಗಳಿಗೆ ಮಾದಕ ವಸ್ತು MDMA ಮಾರಾಟ ಮಾಡುತ್ತಿದ್ದ ಡ್ರಗ್ ಪೆಡ್ಲರ್ ನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನ್ನು ಉಳ್ಳಾಲ ನಿವಾಸಿ ಅಬ್ದುಲ್ ಸವಾಜ್ @ ಚವ್ವಾ(30) ಎಂದು ಗುರುತಿಸಲಾಗಿದೆ.


    ಬಂಧಿತನಿಂದ 25 ಗ್ರಾಂ ತೂಕದ ರೂ. 1,25,000/-ಮೌಲ್ಯದ ಎಂಡಿಎಂಎ ಮಾದಕ ವಸ್ತುವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಆರೋಪಿಯಿಂದ ಮಾದಕವಸ್ತು ಮಾರಾಟಕ್ಕೆ ಬಳಸಲಾದ ಹೊಂಡಾ ಅಕ್ಟಿವಾ ಸ್ಕೂಟರ್, ಮೊಬೈಲ್ ಫೋನ್-1, ನಗದು ರೂ. 2120/- ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 2,17,000/-ಆಗಬಹುದು. ಆರೋಪಿ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *