LATEST NEWS
13 ವರ್ಷ ತಲೆಮರೆಸಿಕೊಂಡಿದ್ದ ಆರೋಪಿ ಮುಂಬೈನಲ್ಲಿ ಅರೆಸ್ಟ್…!!

ಮಂಗಳೂರು, ಸೆಪ್ಟೆಂಬರ್ 5: ಕಳೆದ 13 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಜಪ್ಪಿನಮೊಗರುವಿನ ಪ್ರೀತಮ್ ಆಚಾರ್ಯ(38) ಎಂದು ಗುರುತಿಸಲಾಗಿದೆ. ಈತನನ್ನು ಮುಂಬೈಯಿಂದ ಪೊಲೀಸರು ಬಂಧಿಸಿದ್ದಾರೆ. ಈತನ ಮೇಲೆ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ (ಅ.ಕ್ರ ನಂಬ್ರ 89/2009 ಕಲಂ ಐಪಿಸಿ 403, 406, 408, 409, 415, 417, 420 ಐಪಿಸಿ ದಾಖಲಾಗಿತ್ತು. ಈತನು ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೇ ಇದ್ದುದರಿಂದ ಈತನ ವಿರುದ್ಧ ಎಲ್.ಪಿ.ಸಿ ವಾರೆಂಟ್ ಜಾರಿಯಾಗಿದ್ದು, ಈತನು ಹೋಟೆಲ್‌ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿರುವ ಮಾಹಿತಿ ತಿಳಿದ ಬಳಿಕ ಅವರ ಹಿನ್ನಲೆ ಮುಂಬೈಗೆ ತೆರಳಿದ ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
